Advertise

18 January 2025

19.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಜನವರಿ 19ರಂದು ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. 20ರಿಂದ ಒಂದೆರಡು ದಿನಗಳ ಕಾಲ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿದ್ದು, ನಂತರ ಒಣಹವೆ ಆವರಿಸುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಜನವರಿ 19ರಂದು ಕೊಡಗು ಜಿಲ್ಲೆಯ ಅಲ್ಲಲ್ಲಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕುದುರೆಮುಖ, ಶಿೃಂಗೇರಿ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಚಿಕ್ಕಮಗಳೂರು ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಶಿವಮೊಗ್ಗ ಜಿಲ್ಲೆಯ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 
ಜನವರಿ 20ರಿಂದ ಒಣಹವೆ ಆವರಿಸುವ ಲಕ್ಷಣಗಳಿವೆ. 

ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, 
ಜನವರಿ 19ರಂದು ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 

ಬಂಗಾಳ ಕೊಲ್ಲಿಯ ಕಡೆಯಿಂದ ಹಿಂಗಾರು ರೀತಿಯ ಗಾಳಿಯ ಸಂಚಾರದಿಂದ ಈಗಿನ ಮೋಡ ಹಾಗೂ ಮಳೆಯ ವಾತಾವರಣ ಸೃಷ್ಠಿಯಾಗಿದೆ. ಜನವರಿ 20ರಿಂದ ರಾಜ್ಯದಾದ್ಯಂತ ಒಣಹವೆ ಆವರಿಸುವ ಸಾಧ್ಯತೆಗಳಿವೆ. 


No comments:

Post a Comment

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಅಲ್ಲಲ್ಲಿ ಮಳೆ...