ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಫೆಬ್ರುವರಿ 23ರಿಂದ ಮೋಡದ ವಾತಾವರಣ ಕಡಿಮೆಯಾಗಬಹುದು.
ಮಲೆನಾಡು : ಕೊಡಗು ಅಲ್ಲಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಫೆಬ್ರುವರಿ 23ರಿಂದ ಈ ವಾತಾವರಣವು ಕಡಿಮೆಯಾಗುವ ಲಕ್ಷಣಗಳಿವೆ.
ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡು 2 ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಉತ್ತರ ಸುಮಾತ್ರ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯು ಪಶ್ಚಿಮಾಭಿಮುಖವಾಗಿ ಚಲಿಸುವ ಸಾಧ್ಯತೆಗಳಿದ್ದು ಮಾರ್ಚ್ ಮೊದಲ ವಾರದಲ್ಲಿ ದಕ್ಷಿಣ ಶ್ರೀಲಂಕಾ ಕರಾವಳಿಗೆ ತಲಪುವ ನಿರೀಕ್ಷೆಯಿದೆ.
ಇದರ ಪರಿಣಾಮದಿಂದ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಾರ್ಚ್ ಮೊದಲ ವಾರದಲ್ಲಿ ಮಳೆಯ ಸಾಧ್ಯತೆ ಇದೆ.
No comments:
Post a Comment