Advertise

23 February 2025

24.02.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.02.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಜಿಲ್ಲೆಯ ಒಂದೆರಡು ಕಡೆ, ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಫೆಬ್ರುವರಿ 24ರಿಂದ ಮಳೆ ಕಡಿಮೆಯಾಗಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿವೆ.

ಮಲೆನಾಡು : ಕೊಡಗಿನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸಂಜೆ, ರಾತ್ರಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಫೆಬ್ರುವರಿ 25ರಿಂದ ಮಳೆಯ ಸಾಧ್ಯತೆ ಕಡಿಮೆ ಇರಲಿದ್ದು, ಅಲ್ಲಲ್ಲಿ ಮೋಡದ ವಾತಾವರಣದ ಲಕ್ಷಣಗಳಿವೆ.

ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

ಫೆಬ್ರವರಿ 27ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ. 

No comments:

Post a Comment

08.02.2026 ರಿಂದ 14.02.2026ರ ತನಕದ ಕರ್ನಾಟಕ ಹವಾಮಾನ ವರದಿ

08.02.2026ರಿಂದ 14.02.2026ರ ತನಕದ ಕರ್ನಾಟಕ ಹವಾಮಾನ ವರದಿ : ರಾಜ್ಯದಾದ್ಯಂತ ಈ ವಾರ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ ಹಾಗೂ...