Advertise

04 March 2025

05.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

05.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದ್ದು, ಸೆಖೆಯ ಅನುಭವ ಹೆಚ್ಚಾಗಲಿದೆ. ಗರಿಷ್ಠ ತಾಪಮಾನದಲ್ಲಿ ಒಂದೆರಡು ಡಿಗ್ರಿ ಕಡಿಯಾದರೂ, ಅಧಿಕ ತೇವಾಂಶದಿಂದ ಸೆಖೆ ಹೆಚ್ಚಾಗಬಹುದು. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. 
ಈ ವಾತಾವರಣವು ಮಾರ್ಚ್ 8ರ ತನಕ ಮುಂದುವರಿಯುವ ಲಕ್ಷಣಗಳಿದ್ದು, ನಂತರ ಮೋಡ ಕಡಿಮೆಯಾಗಿ ಬಿಸಿಲಿನ ವಾತಾವರಣದ ಸಾಧ್ಯತೆ ಇದೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದ್ದು, ಮಳೆಯ ಸಾಧ್ಯತೆಗಳು ಕಡಿಮೆಯಾಗಿದೆ. 
ಮಾರ್ಚ್ 8ರ ತನಕ ಮುಂದುವರಿಯುವ ಈ ವಾತಾವರಣವು, ನಂತರ ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ. 

ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ ಇದ್ದು, ಮಳೆಯ ಸಾಧ್ಯತೆಗಳಿಲ್ಲ. 
ಅಲ್ಲಲ್ಲಿ ಮೋಡದ ವಾತಾವರಣವು ಮುಂದಿನ 10 ದಿನಗಳವರೆಗೂ ಮುಂದುವರಿಯುವ ಲಕ್ಷಣಗಳಿವೆ. 

ದಕ್ಷಿಣ ಶ್ರೀಲಂಕಾ ಕರಾವಳಿ ಬಳಿಯಿರುವ ತಿರುಗುವಿಕೆಯು ಶ್ರೀಲಂಕಾದ ಆಗ್ನೇಯಕ್ಕೆ ಚಲಿಸಿ ಶಿಥಿಲಗೊಳ್ಳುವ ಲಕ್ಷಣಗಳಿವೆ. 
ಇದರ ಪರಿಣಾಮದಿಂದ ಬಂಗಾಳಕೊಲ್ಲಿಯ ಭಾಗದಿಂದ ಆಂದ್ರಾ ಮೂಲಕ ರಾಜ್ಯಕ್ಕೆ ಬೀಸುತ್ತಿರುವ ಗಾಳಿಯ ಪ್ರಮಾಣವೂ ಕಡಿಮೆಯಾಗಲಿದ್ದು, ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ. 



03 March 2025

04.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

04.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮೋಡದೊಂದಿಗೆ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದ್ದು, ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. ಅಧಿಕ ಉಷ್ಣಾಂಶ ಹಾಗೂ ಸೆಖೆ ಮುಂದುವರಿಯಲಿದೆ.
ಈಗಿನಂತೆ ಮಾರ್ಚ್ 6ರಂದು ದ. ಕ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ನಂತರ ಮಾರ್ಚ್ 10ರ ವರೆಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯ ಒಂದೆರಡು ಕಡೆ ಸಂಜೆ ಅಥವಾ ರಾತ್ರಿ ತುಂತುರು ಮಳೆಯ ಮುನ್ಸೂಚನೆ ಇದೆ. ಹಗಲು ಮೋಡ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯಲಿದೆ.
ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ಮಾರ್ಚ್ 6ರಂದು ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. 

ಶ್ರೀಲಂಕಾ ದಕ್ಷಿಣ ಕರಾವಳಿಯಲ್ಲಿ ಕಾಣುಸುತ್ತಿರುವ ತಿರುಗುವಿಕೆಯು ಮತ್ತೂ ದಕ್ಷಿಣಕ್ಕೆ ಚಲಿಸಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದರಿಂದ ಯಾವುದೇ ರೀತಿಯ ಪರಿಣಾಮಗಳಿಲ್ಲ. 

01 March 2025

02.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

02.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಉಷ್ಣಾಂಶ ಏರಿಕೆಯ ಜೊತೆಗೆ ಕರಾವಳಿ ತೀರ ಭಾಗಗಳಲ್ಲಿ ವಾತಾವರಣದಲ್ಲಿ ತೇವಾಂಶವೂ ಸ್ವಲ್ಪ ಜಾಸ್ತಿ ಇರಬಹುದು. ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳ ಕರಾವಳಿ ತೀರ  ಭಾಗಗಳಲ್ಲಿ ಅಂದರೆ, ಕಾಸರಗೋಡು, ಮಂಗಳೂರು, ಬಂಟ್ವಾಳ ಜಿಲ್ಲೆಗಳ ಅಲ್ಲಲ್ಲಿ ರಾತ್ರಿ, ತಡ ರಾತ್ರಿಯ ವೇಳೆ ತುಂತುರು ಮಳೆಯ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ರಾತ್ರಿ ಹೆಚ್ಚಿನ ಸಮಯ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ರಾತ್ರಿಯ ವೇಳೆ ಸೆಖೆಯ ವಾತಾವರಣದ ಸಾಧ್ಯತಯೂ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ರಾತ್ರಿಯ ವೇಳೆ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ಮಾರ್ಚ್ 4 ಅಥವಾ 5 ರಿಂದ ಮೋಡದ ವಾತಾವರಣ ಹೆಚ್ಚಿರುವ ಸಾಧ್ಯತೆಗಳಿದ್ದು, ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಮಲೆನಾಡು : ಕೊಡಗು, ಹಾಸನ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಈಗಿನ ಮಾರ್ಚ್ 4ರಿಂದ ಮೋಡ ಹೆಚ್ಚಾಗದ್ದು, ಒಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ಒಂದೆರಡು ಕಡೆ ಹಗುರ ಮೋಡದ ಸಾಧ್ಯತೆಯೂ ಇದೆ.
ದಕ್ಷಿಣ ಒಳನಾಡಿನ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಮಳೆಯ ಸಾಧ್ಯತೆಗಳಿಲ್ಲ. 
ಈಗಿನಂತೆ ಮಾರ್ಚ್ 5ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಮೋಡ ಸ್ವಲ್ಪ ಹೆಚ್ಚಿರುವ ಸಾಧ್ಯತೆಗಳಿದ್ದರೂ ಮಳೆಯ ಮುನ್ಸೂಚೆನೆ ಕಾಣಿಸುತ್ತಿಲ್ಲ. 

ದಕ್ಷಿಣ ಶ್ರೀಲಂಕಾ ಬಳಿ ತಲುಪಿರುವ ತಿರುವಿಕೆಯು ಇಂದು ಅರಬ್ಬಿ ಸಮುದ್ರ ಪ್ರವೇಶಿಸುವ ಹಂತದಲ್ಲಿದೆ. 

05.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

05.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ...