Advertise

12 March 2025

13.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


13.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಜಿಲ್ಲೆಯಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಪ್ರದೇಶಗಳ ಒಂದೆರಡು ಕಡೆ ಸಂಜೆ, ರಾತ್ರಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಡುಪಿಯ ಕಾರ್ಕಳ ಸುತ್ತಮುತ್ತ ಸಹ ಸಂಜೆ ಅಥವಾ ರಾತ್ರಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣಹವೆ ಮುಂದುವರಿಯಲಿದೆ. (ವಾತಾವರಣದಲ್ಲಿ ತೇವಾಂಶ ಕಡಿಮೆಯಾಗಿದೆ. ಸಂಜೆ ಹಾಗೂ ರಾತ್ರಿ ಹೀಗೆ ಮುಂದುವರಿದರೆ ಮಳೆಯ ಸಾಧ್ಯತೆಯೂ ಕಡಿಮೆಯಾಗಬಹುದು) 
ಈಗಿನಂತೆ ಮಾರ್ಚ್ 17ರಿಂದ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು ಅಲ್ಲಲ್ಲಿ ಹಾಗೂ ಚಿಕ್ಕಮಗಳೂರಿನ ಮೂಡಿಗೆರೆ, ಆಗುಂಬೆ, ಶಿೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 
ಈಗಿನಂತೆ ಮಾರ್ಚ್ 17ರಿಂದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 
ದಕ್ಷಿಣ ಒಳನಾಡಿನ ಚಾಮರಾಜನಗರದ ಕೊಳ್ಳೇಗಾಲ ಸುತ್ತಮುತ್ತ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ ಹಾಗೂ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. 
ಈಗಿನಂತೆ ಮಾರ್ಚ್ 17ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. 
ಶ್ರೀಲಂಕಾ ಬಳಿಯ ತಿರುವಿಕೆಯ ಮತ್ತಷ್ಟು ಪಶ್ಚಿಮಕ್ಕೆ ಚಲಿಸಿದ್ದು, ಅಲ್ಲೇ ಶಿಥಿಲಗೊಳ್ಳುವ ಸಾಧ್ಯತೆಗಳಿವೆ. 


No comments:

Post a Comment

08.02.2026 ರಿಂದ 14.02.2026ರ ತನಕದ ಕರ್ನಾಟಕ ಹವಾಮಾನ ವರದಿ

08.02.2026ರಿಂದ 14.02.2026ರ ತನಕದ ಕರ್ನಾಟಕ ಹವಾಮಾನ ವರದಿ : ರಾಜ್ಯದಾದ್ಯಂತ ಈ ವಾರ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ ಹಾಗೂ...