Advertise

13 March 2025

14.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

14.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಕಾಸರಗೋಡು ಒಂದೆರಡು ಕಡೆ ರಾತ್ರಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಸುಬ್ರಮಣ್ಯ ಸುತ್ತಮುತ್ತ ಸಂಜೆ ಅಥವಾ ರಾತ್ರಿ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಕರಾವಳಿಯಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣವು ಮುಂದುವರಿಯುವ ಲಕ್ಷಣಗಳಿದ್ದು, ವಾರದಲ್ಲಿ 2 ರಿಂದ 3 ಮಳೆಯ ಸಾಧ್ಯತೆ ಇದೆ.

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಈಗಿನ ಮುನ್ಸೂಚನೆಯಂತೆ ಮುಂದಿನ ದಿನಗಳಲ್ಲಿ ದಿನ ಬಿಟ್ಟು ದಿನ ಅಲ್ಲಲ್ಲಿ ಸಂಜೆ ಹಾಗೂ ರಾತ್ರಿಯ ವೇಳೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.

ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ಮಾರ್ಚ್ 17ರ ನಂತರ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ. 

ಲಾನಿನಾ ಪ್ರಭಾವ ಇರುವುದರಿಂದ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಉಷ್ಣಾಂಶ ಏರಿಕೆಯಾದಂತೆ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣಗಳಿವೆ. ಉತ್ತರ ಒಳನಾಡು ಭಾಗಗಳಲ್ಲಿ ಸ್ವಲ್ಪ ತಡವಾಗಬಹುದು. 

No comments:

Post a Comment

08.02.2026 ರಿಂದ 14.02.2026ರ ತನಕದ ಕರ್ನಾಟಕ ಹವಾಮಾನ ವರದಿ

08.02.2026ರಿಂದ 14.02.2026ರ ತನಕದ ಕರ್ನಾಟಕ ಹವಾಮಾನ ವರದಿ : ರಾಜ್ಯದಾದ್ಯಂತ ಈ ವಾರ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ ಹಾಗೂ...