Advertise

23 March 2025

24.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತ ಒಂದೆರಡು ಕಡೆ ಸಂಜೆ ಅಥವಾ ರಾತ್ರಿ ತುಂತುರು ಮಳೆಯ ಸಾಧ್ಯತೆ ಇದೆ.
ಈಗಿನಂತೆ ಮಾರ್ಚ್ 24 ಹಾಗೂ 25ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ  ಮಳೆಯ ಮುನ್ಸೂಚನೆ ಇದೆ 

ಮಲೆನಾಡು : ಕೊಡಗು ಹಾಗೂ ಹಾಸನ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಮಾರ್ಚ್ 24 ಹಾಗೂ 25ರಂದು ಚಿಕ್ಕಮಗಳೂರು ಜಿಲ್ಲೆಯ ಅಲ್ಲಲ್ಲಿ ಮಳೆಯ ಇದೆ. ನಂತರ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. 

ಒಳನಾಡು : ಉತ್ತರ ಒಳನಾಡಿನ ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ, ರಾಯಚೂರು, ಬಳ್ಳಾರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಹನಿ ಸಾಧ್ಯತೆಯೂ ಇದೆ. 
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಒಳನಾಡು ಭಾಗಗಳಲ್ಲಿ ಮಾರ್ಚ್ 24ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. 



No comments:

Post a Comment

08.02.2026 ರಿಂದ 14.02.2026ರ ತನಕದ ಕರ್ನಾಟಕ ಹವಾಮಾನ ವರದಿ

08.02.2026ರಿಂದ 14.02.2026ರ ತನಕದ ಕರ್ನಾಟಕ ಹವಾಮಾನ ವರದಿ : ರಾಜ್ಯದಾದ್ಯಂತ ಈ ವಾರ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ ಹಾಗೂ...