Advertise

24 March 2025

25.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಉತ್ತರ ಭಾಗಗಳಲ್ಲಿ ಸಹ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
( ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಗಾಳಿಯ ಸಹಿತ ಮಳೆಯಾದರೆ ಮಾತ್ರ ಜಿಲ್ಲೆಗಳ ಉಳಿದ ಭಾಗಗಳಿಗೆ ಮಳೆ ವ್ಯಾಪಿಸಬಹುದು) 
ಈಗಿನಂತೆ ಮುಂದಿನ ಮೂರು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. 

ಮಲೆನಾಡು : ಕೊಡಗು ಮತ್ತು ಹಾಸನ ಜಿಲ್ಲೆಗಳ ಅಲ್ಲಲ್ಲಿ, ಚಿಕ್ಕಮಗಳೂರನ ಮೂಡಿಗೆರೆ, ಬಾಳೆಹೊನ್ನೂರು, ಶಿೃಂಗೇರಿ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ, ಶಿವಮೊಗ್ಗದ ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಗಾಳಿಯ ಪಾತ್ರ ಮಹತ್ವದ್ದು. 
ಈಗಿನಂತೆ ಮುಂದಿನ 2 ದಿವಸಗಳ ಕಾಲ ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಒಳನಾಡು : ಉತ್ತರ ಒಳನಾಡಿನ, ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಗಾಳಿಯ ಪ್ರಭಾವದಿಂದ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ. 
ದಕ್ಷಿಣ ಒಳನಾಡಿನ ಚಾಮರಾಜನಗರದ ಒಂದೆರಡು ಭಾಗಗಳಲ್ಲಿ, ಬೆಂಗಳೂರು - ತಮಿಳುನಾಡು ಗಡಿಭಾಗಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗಿನಂತೆ ಮುಂದಿನ 3 ದಿವಸಗಳ ಕಾಲ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಗಳಿದ್ದು, ಒಳನಾಡು ಭಾಗಗಳಲ್ಲಿ ಮಳೆ ಕ್ಷೀಣಿಸುವ ಲಕ್ಷಣಗಳಿವೆ. 
ಆದರೆ ಮಾರ್ಚ್ 30 ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ. 



No comments:

Post a Comment

08.02.2026 ರಿಂದ 14.02.2026ರ ತನಕದ ಕರ್ನಾಟಕ ಹವಾಮಾನ ವರದಿ

08.02.2026ರಿಂದ 14.02.2026ರ ತನಕದ ಕರ್ನಾಟಕ ಹವಾಮಾನ ವರದಿ : ರಾಜ್ಯದಾದ್ಯಂತ ಈ ವಾರ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ ಹಾಗೂ...