Advertise

30 April 2025

01.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

01.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಜಿಲ್ಲೆಯಲ್ಲಿ ತಡ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಮೋಡದ  ವಾತಾವರಣ ಇರಬಹುದು.
ಈಗಿನಂತೆ ಮೇ ಮೊದಲ 3, 4 ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದರೂ, ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಮಳೆಯ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನದ ಸಕ್ಲೇಶ್ಪುರ ಸುತ್ತಮುತ್ತ, ಚಿಕ್ಕಮಗಳೂರನ ಮೂಡಿಗೆರೆ, ಬಾಳೆಹೊನ್ನೂರು, ಶಿೃಂಗೇರಿ, ಕುದುರೆಮುಖ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಶಿವಮೊಗ್ಗ ಹೊರತುಪಡಿಸಿ ಉಳಿದ ಮಲೆನಾಡು ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಮೇ 6 ರಿಂದ ಮಳೆ ಹೆಚ್ಚಾಗುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಮಳಯ ಸಾಧ್ಯತೆ ಕಡಿಮೆಯಾಗುತ್ತಿದೆ. ಆದರೂ ಒಂದೆರಡು ಕಡೆ ಸೀಮಿತ ಪ್ರದೇಶಗಳಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಬೆಂಗಳೂರು ಉತ್ತರ ಹಾಗೂ ತುಮಕೂರು ಜಿಲ್ಲೆಗಳ ಒಂದೆರಡು ಕಡೆ, ಸೀಮಿತ ಪ್ರದೇಶಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ ಒಳನಾಡು ಸಹಿತ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗುವ ಲಕ್ಷಣಗಳಿವೆ. 

29 April 2025

30.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

30.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಅರಬ್ಬಿ ಸಮುದ್ರದ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವದಿಂದ ಕಾಸರಗೋಡು ಅಲ್ಲಲ್ಲಿ, ಮಂಗಳೂರು ಹಾಗೂ ಬಂಟ್ವಾಳ ತಾಲೂಕುಗಳ ಕೆಲವು ಭಾಗಗಳಲ್ಲಿ ಮುಂಜಾನೆ ಮಳೆಯಾಗಿದ್ದು, ಇವತ್ತು ಸಹ ಅದೇ ರೀತಿಯ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಪುತ್ತೂರು, ಸುಳ್ಯ, ಕಡಬ, ಬೆಳ್ತಂಗಡಿ, ಮೂಡಬಿದರೆ ತಾಲೂಕುಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.
ಉಡುಪಿ ಜಿಲ್ಲೆಯ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 6ರಿಂದ ಹೆಚ್ಚಾಗುವ ನಿರೀಕ್ಷೆ ಇದೆ. 

ಮಲೆನಾಡು : ಕೊಡಗು ಜಿಲ್ಲೆಯ ಒಂದೆರಡು ಕಡೆ, ಹಾಸನದ ಸಕ್ಲೇಶ್ಪುರ ಸುತ್ತಮುತ್ತ, ಚಿಕ್ಕಮಗಳೂರನ ಮೂಡಿಗೆರೆ, ಬಾಳೆಹೊನ್ನೂರು, ಶಿೃಂಗೇರಿ, ಕುದುರೆಮುಖ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ( ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ) ಮಳೆ ಮುಂದುವರಿಯುವ ಲಕ್ಷಣಗಳಿವೆ. ಶಿವಮೊಗ್ಗ ಜಿಲ್ಲೆಯಲ್ಲಿ ಮೇ 6ರಿಂದ ಮಳೆ ಹೆಚ್ಚಾಗುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಮಳೆಯ ಸಾಧ್ಯತೆಗಳು ಕಡಿಮೆಯಾಗುತ್ತಿದೆ.
ದಕ್ಷಿಣ ಒಳನಾಡಿನ ಚಿತ್ರದುರ್ಗ ಒಂದೆರಡು ಕಡೆ ಹಾಗೂ ಮೈಸೂರು ಒಂದೆರಡು ಕಡೆ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಉಳಿದ ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ದಕ್ಷಿಣ ಒಳನಾಡಿನಲ್ಲಿ ಮೇ 1ರಿಂದ ಹಾಗೂ ಉತ್ತರ ಒಳನಾಡಿನಲ್ಲಿ ಮೇ 5ರಿಂದ ಮಳೆ ಆರಂಭವಾಗುವ ಲಕ್ಷಣಗಳಿವೆ. 

28 April 2025

29.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

29.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು - ಕರ್ನಾಟಕದ ಗಡಿ ಭಾಗಗಳ ಸುತ್ತಮುತ್ತ, ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಭಾಗಗಳಲ್ಲಿ, ಉಡುಪಿ ಜಿಲ್ಲೆಯ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಮೋಡದ ವಾತಾವರಣದ ಜೊತೆಗೆ ಒಂದೆರಡು ಕಡೆ ಅನಿರೀಕ್ಷಿತ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. 
ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಮಳೆ ಸ್ವಲ್ಪ ಕಡಿಮೆ ಇರುವ ಸಾಧ್ಯತೆಗಳಿದ್ದರೂ ಮೇ 1ರಿಂದ ಮಳೆ ಹೆಚ್ಚಾಗುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು, ಹಾಸನ ಜಿಲ್ಲೆಯ ಕರಾವಳಿ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ, ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಕುದುರೆಮುಖ, ಆಗುಂಬೆ, ಶಿೃಂಗೇರಿ ಕೊಪ್ಪ ಸುತ್ತಮುತ್ತ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ, ತೀರ್ಥಹಳ್ಳಿ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಶಿವಮೊಗ್ಗ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಚಿಕ್ಕಮಗಳೂರು ಹಾಗೂ ಹಾಸನ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ತುಂತುರು ಮಳೆಯ ಸಾಧ್ಯತೆ ಇದೆ. 
ಈಗಿನಂತೆ ಎಪ್ರಿಲ್ 29ರಿಂದ ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಮೇ 1ರಿಂದ ಮಳೆ ಹೆಚ್ಚಾಗುವ ಸೂಚನೆಗಳಿವೆ. 

ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳ ಒಂದೆರಡು ಕಡೆ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಉಳಿದ ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 
ದಕ್ಷಿಣ ಒಳನಾಡಿನ ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ತುಮಕೂರು ಜಿಲ್ಲೆಗಳ ಒಂದೆರಡು ಕಡೆ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು, ಮೋಡದ ವಾತಾವರಣ ಇರಬಹುದು. 
ಈಗಿನಂತೆ ಮುಂದಿನ 2 ದಿವಸಗಳ ಕಾಲ ಮಳೆ ಕಡಿಮೆಯಾಗುವ ಸೂಚನೆಗಳಿದ್ದು, ಮೇ 1ರಿಂದ ದಕ್ಷಿಣ ಒಳನಾಡು ಹಾಗೂ ಮೇ 4ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. 



27 April 2025

28.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

28.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು - ಕರ್ನಾಟಕ ಗಡಿ ಭಾಗಗಳ ಅಲ್ಲಲ್ಲಿ, ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಅಲ್ಲಲ್ಲಿ, ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಎಪ್ರಿಲ್ 29 ಅಥವಾ 30ರಿಂದ ಕರಾವಳಿ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು ಅಲ್ಲಲ್ಲಿ, ಹಾಸನದ ಸಕ್ಲೇಶ್ಪುರ ಸುತ್ತಮುತ್ತ, ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶಿೃಂಗೇರಿ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗದ ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಸಹ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ.
ಈಗಿನಂತೆ ಎಪ್ರಿಲ್ 28ರಿಂದ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. 

ಒಳನಾಡು : ಉತ್ತರ ಒಳನಾಡಿನ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ವಿಜಯಪುರ, ಕೊಪ್ಪಳ, ದಾವಣಗೆರೆ, ರಾಯಚೂರು, ಬಳ್ಳಾರಿ, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ರಾತ್ರಿ ಬೆಂಗಳೂರು, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಈಗಿನಂತೆ ಎಪ್ರಿಲ್ 28ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

ರಾಜ್ಯದ ಮಧ್ಯಾಹ್ನ ನಂತರದ ವಾತಾವರಣದಲ್ಲಿ ಗಾಳಿಯ ದಿಕ್ಕು ನಿರ್ದಿಷ್ಟ ಪಥದಲ್ಲಿ ಇಲ್ಲದ ಕಾರಣ ಇಂತಹ ಪ್ರದೇಶಗಳಲ್ಲೆ ಮಳೆಯಾಗುತ್ತದೆ ಅಂತ ಹೇಳಲು ಸಾಧ್ಯವಿಲ್ಲ. 

26 April 2025

27.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

27.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆ ಮಳೆಯ ಸಾಧ್ಯತೆ ಇದೆ. 
ಈಗಿನಂತೆ ಎಪ್ರಿಲ್ ಕೊನೆಯ ತನಕವೂ ಕರಾವಳಿರ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ಮೇ ವೊದಲ ವಾರದಲ್ಲಿ ಮಳೆ ಕ್ಷೀಣಿಸುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. 
ಈಗಿನಂತೆ ಮಲೆನಾಡು ಭಾಗಗಳಲ್ಲಿ ಮುಂದಿನ 10 ದಿನಗಳವರೆಗೂ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. 

ಒಳನಾಡು : ಉತ್ತರ ಒಳನಾಡಿನ ಮಹಾರಾಷ್ಟ್ರ ಗಡಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ಬಳ್ಳಾರಿ, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ರಾಯಚೂರು, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲೂ ಮಳೆಯ ಸಾಧ್ಯತೆ ಇದೆ. 
ದಕ್ಷಿಣ ಒಳನಾಡಿನ ಅಲ್ಲಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆಗಳಿವೆ.  ಚಿತ್ರದುರ್ಗ, ತುಮಕೂರು (ಪಾವಗಢ ಸಹಿತ ), ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಮೇ 1ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಸ್ವಲ್ಪ ಜಾಸ್ತಿಯಾಗುವ ಲಕ್ಷಣಗಳಿವೆ 

26.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸೆಖೆಯೊಂದಿಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಸಂಜೆ, ರಾತ್ರಿ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಕರಾವಳಿ ತೀರದವರೆಗೂ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ. 
ಮಧ್ಯಾಹ್ನ ನಂತರ ಪಶ್ಚಿಮದ ಗಾಳಿಯ ಪ್ರಭಾವ ಹೆಚ್ಚಾಗುವುದರಿಂದ ಕರಾವಳಿಯಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನದ ಸಕ್ಲೇಶ್ಪುರ ಸುತ್ತಮುತ್ತ, ಚಿಕ್ಕಮಗಳೂರನ ಮೂಡಿಗೆರೆ, ಬಾಳೆಹೊನ್ನೂರು, ಆಗುಂಬೆ, ಶಿೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಎಪ್ರಿಲ್ 27ರಿಂದ ಮಲೆನಾಡು ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ. 

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಇಲ್ಲಿ ಗಾಳಿಯ ಪಾತ್ರ ಮಹತ್ವದ್ದಾಗಿದೆ. 
ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 
ಈಗಿನಂತೆ ಉತ್ತರ ಒಳನಾಡಿನಲ್ಲಿ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿದ್ದು ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ. ಮುನ್ಸೂಚನೆಯಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ. 

24 April 2025

25.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಹಗಲಿನ ವೇಳೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸಂಜೆ ಹಾಗೂ ರಾತ್ರಿ ಘಟ್ಟದ ಕೆಳಗಿನ ಪ್ರದೇಶಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಪೂರ್ವದಿಂದ ಒತ್ತಡ ಹೆಚ್ಚಿದ್ದರೆ ಕರಾವಳಿ ತೀರದವರೆಗೂ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಉತ್ತರ ಒಳನಾಡು ಭಾಗಗಳ ಮಳೆ ಹಾಗೂ ಗಾಳಿಯ ಒತ್ತಡಕ್ಕೆ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ಎಪ್ರಿಲ್ 27ರಿಂದ ಮಳೆ ಹಾಗೂ ವ್ಯಾಪ್ತಿ ಸ್ವಲ್ಪ ಹೆಚ್ಚಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. (ಕಳೆದ ಕೆಲವು ದಿನಗಳಿಂದ ನಿರೀಕ್ಷೆ ಮಟ್ಟದ ಮಳೆಯಾಗುತ್ತಿಲ್ಲ). ಹಾಸನ ಜಿಲ್ಲೆಯ ಸಕಲೇಶಪುರ ಸುತ್ತಮುತ್ತ, ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶಿೃಂಗೇರಿ, ಕುದುರೆಮುಖ, ಆಗುಂಬೆ ಸುತ್ತಮುತ್ತ, ಶಿವಮೊಗ್ಗದ ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗಿನೊಂದಿಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಈಗಿನಂತೆ ಎಪ್ರಿಲ್ 26ರಿಂದ ಮಲೆನಾಡಿನ ಬಹುತೇಕ ಭಾಗಗಳಲ್ಲಿ ಮಳೆ ಆರಂಭವಾಗುವ ನಿರೀಕ್ಷೆ ಇದೆ. 

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರ್ಗಿ ಸಹ ಅಲ್ಲಲ್ಲಿ ಮಳೆಯಗಬಹುದು. 
ದಕ್ಷಿಣ ಒಳನಾಡಿನ ಚಿತ್ರದುರ್ಗ, ಮೈಸೂರು ಜಿಲ್ಲೆಯ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಭಾಗಶಃ ಮೋಡದ ವಾತಾವರಣ ಇರಬಹುದು. 
ಈಗಿನಂತೆ ಎಪ್ರಿಲ್ 26 ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಅನೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಲಕ್ಷಣಗಳಿವೆ. 


23 April 2025

24.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಕಾಸರಗೋಡು ತನಕವೂ ಮಳೆಯ ಸಾಧ್ಯತೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿಯ ಗಾಳಿಯ ಒತ್ತಡ ಹೆಚ್ಚಿದ್ದರೆ ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಮಳೆಯ ಸಾಧ್ಯತೆಗಳವೆ. 
ಈಗಿನಂತೆ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಎಪ್ರಿಲ್ 27ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಎಪ್ರಿಲ್ 27ರ ನಂತರ ಮಳೆ ಹೆಚ್ಚಾಗುವ ಲಕ್ಷಣಗಳಿವೆ. ಅಲ್ಲಿಯತನಕ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. 

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಇಲ್ಲಿ ಗಾಳಿಯ ಪಾತ್ರ ಮಹತ್ವದ್ದಾಗಿದೆ. ಗಾಳಿಯ ಒತ್ತಡ ಹೆಚ್ಚಿದ್ದರೆ ಕೊಪ್ಪಳ, ಹಾವೇರಿ ಜಿಲ್ಲೆಯಲ್ಲೂ ಮಳೆಯ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಈಗಿನಂತೆ ಉತ್ತರ ಒಳನಾಡಿನಲ್ಲಿ ಅನಿರೀಕ್ಷಿತ ಮಳೆಯಾಗುತ್ತಿದ್ದು, ದಕ್ಷಿಣ ಒಳನಾಡು ಭಾಗಗಳಲ್ಲಿ ಎಪ್ರಿಲ್ 27ರಿಂದ ಮಳೆ ಆರಂಭವಾಗುವ ಲಕ್ಷಣಗಳಿವೆ. 

22 April 2025

23.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

23.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸೆಖೆಯೊಂದಿಗೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸಂಜೆ ರಾತ್ರಿ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ತುಂತುರು ಮಳೆಯ ಮುನ್ಸೂಚನೆ ಇದೆ. ಬಂಗಾಳಕೊಲ್ಲಿಯ ಕಡೆಯಿಂದ ಗಾಳಿಯ ಪ್ರಭಾವ ಹೆಚ್ಚಿದ್ದರೆ ಇತರ ಭಾಗಗಳಲ್ಲಿಯೂ ಮಳೆಯ ಸಾಧ್ಯತೆ ಇದೆ.
ಈಗಿನಂತೆ ಎಪ್ರಿಲ್ 25ರ ವರೆಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು 26ರಿಂದ ಮಳೆ ಹೆಚ್ಚಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಎಪ್ರಿಲ್ 26ರಿಂದ ಮಳೆಯ ಪ್ರಮಾಣವು ಹೆಚ್ಚಾಗುವ ಸಾಧ್ಯತೆಗಳಿವೆ. 

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 
ಈಗಿನಂತೆ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಎಪ್ರಿಲ್ 26ರಿಂದ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಸಾಧ್ಯತೆಗಳಿವೆ. ಅಲ್ಲಿಯ ತನಕ ಕೆಲವು ಸೀಮಿತ ಪ್ರದೇಶಗಳಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. 

20 April 2025

21.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

21.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದೊಂದಿಗೆ ಸಂಜೆ, ರಾತ್ರಿ, ಮುಂಜಾನೆ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ( ಇವತ್ತು ಮುಂಜಾನೆ ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯಾಗಿದೆ). ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ, ಮುಂಜಾನೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ ಸುತ್ತಮುತ್ತ ಸಂಜೆ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಒಳನಾಡು : ಉತ್ತರ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಬಳ್ಳಾರಿ ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ದಾವಣಗೆರೆಯ ಒಂದೆರಡು ಕಡೆಯೂ ಮಳೆಯ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 
ದಕ್ಷಿಣ ಒಳನಾಡಿನ ಚಿತ್ರದುರ್ಗ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಬೆಂಗಳೂರು, ರಾಮನಗರ, ಮಂಡ್ಯ, ಚಾಮರಾಜನಗರ, ಮೈಸೂರು ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಸಂಜೆ, ರಾತ್ರಿ ವೇಳೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಎಪ್ರಿಲ್ 21ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಎಪ್ರಿಲ್ 25ರಿಂದ ಮತ್ತೆ ಮಳೆಯ ಮುನ್ಸೂಚೆನೆ ಇದೆ. 

ಅರಬ್ಬಿ ಸಮುದ್ರದ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವ ಕಡಿಮೆಯಾಗುತ್ತಿದ್ದು, ಬಂಗಾಳಕೊಲ್ಲಿಯ ಕಡೆಯಿಂದ ಅಂದರೆ ಪೂರ್ವ ದಿಕ್ಕಿನಿಂದ ಬೀಸುವ ಗಾಳಿಯ ಪ್ರಭಾವ ಹೆಚ್ಚಾಗುವ ಲಕ್ಷಣಗಳಿವೆ. 

19 April 2025

20.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


20.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಸಂಜೆ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚೆನೆ ಇದೆ. ಗಾಳಿಯ ಪ್ರಭಾವ ಹಾಗೂ ಒತ್ತಡ ಹೆಚ್ಚಿದ್ದರೆ ಕಾಸರಗೋಡು ಜಿಲ್ಲೆಯಲ್ಲೂ ಮತ್ತು ದ. ಕ. ಉಳಿದ ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಉಡುಪಿ ಜಿಲ್ಲೆಯಲ್ಲಿ ಈಗಾಗಲೇ ಮೋಡದ ವಾತಾವರಣ ಉಂಟಾಗಿದ್ದು, ಸಂಜೆ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಉಳಿದ ಭಾಗಗಳಲ್ಲಿಯೂ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಈಗಾಗಲೇ ಮೋಡದ ವಾತಾವರಣ ಇದ್ದು, ಮಳೆಯ ಸಾಧ್ಯತೆಗಳು ಕಡಿಮೆಯಾಗುತ್ತಿದೆ. 
ಈಗಿನಂತೆ ಕರಾವಳಿ ಭಾಗಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಮಲೆನಾಡು : ಕೊಡಗಿನ ಬಹುತೇಕ ಭಾಗಗಳಲ್ಲಿ  ಸಂಜೆ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಹಾಸನದ ಸಕ್ಲೇಶ್ಪುರ ಸುತ್ತಮುತ್ತ, ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶಿೃಂಗೇರಿ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಶಿವಮೊಗ್ಗ ಜಿಲ್ಲೆಯ  ಅಲ್ಲಲ್ಲಿ ಸಂಜೆ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಈಗಾಗಲೇ ಮೋಡ ವಾತಾವರಣ ಇದ್ದು, ಗದಗ, ಬಳ್ಳಾರಿ, ದಾವಣಗೆರೆ ಕೊಪ್ಪಳ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಇಲ್ಲಿ ಗಾಳಿಯ ಪಾತ್ರ ಮಹತ್ವದ್ದಾಗಿದೆ.
ದಕ್ಷಿಣ ಒಳನಾಡಿನ ಮೈಸೂರು, ಬೆಂಗಳೂರು ಹಗೂ ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಇತರ ಭಾಗಗಳಲ್ಲಿಯೂ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. 
ಈಗಿನಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. 

18 April 2025

19.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯುವ ಮುನ್ಸೂಚೆನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಕೆಲವು ಸೀಮಿತ ಪ್ರದೇಶಗಳಲ್ಲಿ ಸಂಜೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. 
ಈಗಿನಂತೆ ಎಪ್ರಿಲ್ 21ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಗಾಳಿಯ ಪ್ರಮಾಣ ಹೆಚ್ಚಿದ್ದರೆ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. 
ಈಗಿನಂತೆ ಮಲೆನಾಡು ಭಾಗಗಳಲ್ಲಿ ಸಂಜೆಯ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಒಳನಾಡು : ಉತ್ತರ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಧಾರವಾಡ, ಬಳ್ಳಾರಿ, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಇಲ್ಲಿ ಗಾಳಿಯ ಪಾತ್ರ ಮಹತ್ವದ್ದಾಗಿದ್ದು, ಪ್ರಮಾಣ ಹೆಚ್ಚಿದ್ದರೆ, ಕೊಪ್ಪಳ, ಹಾವೇರಿ ಜಿಲ್ಲೆಗಳ ಒಂದೆರಡು ಕಡೆ ಮಳೆಯ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. 
ದಕ್ಷಿಣ ಒಳನಾಡಿನ ಚಿತ್ರದುರ್ಗ ಉತ್ತರ, ತುಮಕೂರಿನ ಪಾವಗಢ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳ ಆಂದ್ರಾ ಗಡಿ ಭಾಗಗಳ ಅಲ್ಲಲ್ಲಿ, ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 
ಈಗಿನಂತೆ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಕೆಲವು ಸೀಮಿತ ಪ್ರದೇಶಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಹೆಚ್ಚು ವ್ಯಾಪ್ತಿಯಲ್ಲಿ ಮಳೆಯಾಗುವ ಸಾಧ್ಯತೆಗಳು ಕಡಿಮೆಯಾಗುತ್ತಿದೆ. 

17 April 2025

18.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸೆಖೆ ಸ್ವಲ್ಪ ಜಾಸ್ತಿಯೇ ಇರಲಿದೆ. 
ಈಗಿನಂತೆ ಎಪ್ರಿಲ್ 20ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಮಲೆನಾಡು : ಕೊಡಗು ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮೊಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ  ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 
ಈಗಿನಂತೆ ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿಯಲಿದ್ದು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. ಎಪ್ರಿಲ್ 19 ಅಥವಾ 20 ರಿಂದ ಮಳೆ ಆರಂಭವಾಗುವ ಸಾಧ್ಯತೆಗಳಿವೆ. 

ಒಳನಾಡು : ಉತ್ತರ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ದಕ್ಷಿಣ ಒಳನಾಡಿನ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. 
ಈಗಿನಂತೆ ಎಪ್ರಿಲ್ 20ರಿಂದ ದಕ್ಷಿಣ ಒಳನಾಡು ಹಾಗೂ 21 ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. 

2025ನೇ ಸಾಲಿನ ಭಾರತೀಯ ಹವಾಮಾನ ಇಲಾಖೆಯ ಮುಂಗಾರು ಪ್ರಥಮ ಸುತ್ತಿನ ( ಜೂನ್ - ಸೆಪ್ಟೆಂಬರ್ ) ವರದಿ ಪ್ರಕಟಿಸಲಾಗಿದ್ದು, ರಾಜ್ಯದಲ್ಲಿ ಸಾಮಾನ್ಯ ಮುಂಗಾರು ಇರುವ ಸಾಧ್ಯತೆಗಳನ್ನು ಹೇಳುತ್ತಿದೆ. 

15 April 2025

16.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

16.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 
ಇಲ್ಲಿ ಗಾಳಿಯ ಪಾತ್ರ ಮಹತ್ವದ ಪಾತ್ರ ವಹಿಸಲಿದೆ. 
ಈಗಿನಂತೆ ಎಪ್ರಿಲ್ 19ರ ತನಕ ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಕಾಣಿಸುತ್ತಿಲ್ಲ. 20ರಿಂದ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. 

ಮಲೆನಾಡು : ಕೊಡಗು ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯ ಸಕಲೇಶಪುರ ಸುತ್ತಮುತ್ತ ತುಂತುರು ಹಾಗೂ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಶಿೃಂಗೇರಿ, ಬಾಳೆಹೊನ್ನೂರು, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ಎಪ್ರಿಲ್ 16ರಿಂದ ಮಲೆನಾಡು ಭಾಗಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿದ್ದರೂ ಉತ್ತಮ ಮಳೆಯ ಸಾಧ್ಯತೆ ಕಡಿಮೆ ಇರಬಹುದು. ಎಪ್ರಿಲ್ 19ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ. 

ಒಳನಾಡು : ಉತ್ತರ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಮುನ್ಸೂಚೆನೆ ಇದೆ.
ದಕ್ಷಿಣ ಒಳನಾಡಿನಲ್ಲೂ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಎಪ್ರಿಲ್ 19ರಿಂದ ಮಳೆ ಆರಂಭವಾಗುವ ಸಾಧ್ಯತೆಗಳಿವೆ.
ಉತ್ತರ ಒಳನಾಡು ಭಾಗಗಳಲ್ಲಿ ಎಪ್ರಿಲ್ 21ರಿಂದ ಮಳೆ ಆರಂಭವಾಗುವ ಲಕ್ಷಣಗಳಿವೆ. 


14 April 2025

15.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

15.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಜಿಲ್ಲೆಯ ಅಲ್ಲಲ್ಲಿ  ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಹಾಗೂ ಕೇರಳ ಗಡಿ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಇಲ್ಲಿ ಗಾಳಿಯ ಪಾತ್ರ ಮಹತ್ವದ್ದಾಗಿದೆ. ಗಾಳಿಯ ಒತ್ತಡ ಹೆಚ್ಚಿದ್ದರೆ ಇತರ ಭಾಗಗಳಲ್ಲಿಯೂ ಮಳೆಯ ಸಾಧ್ಯತೆ ಇದೆ. ಉಡುಪಿ, ದ. ಕ. ಗಡಿ ಭಾಗಗಳಲ್ಲಿಯೂ ಮಳೆಯ ಸಾಧ್ಯತೆ ಇದೆ. ಉಳಿದ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಎಪ್ರಿಲ್ 19ರ ತನಕ ಮಳೆಯ ಪ್ರಮಾಣ ತುಂಬಾ ಕಡಿಮೆಯಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಹಾಸನ ಅಲ್ಲಲ್ಲಿ ಮೋಡದ ವಾತಾವರಣ ಹಾಗೂ ಸಕ್ಲೇಶ್ಪುರ ಸುತ್ತಮುತ್ತ ತುಂತುರು ಮಳೆಯ ಸಾಧ್ಯತೆಗಳದ್ದು, ಚಿಕ್ಕಮಗಳೂರಿನ ಶಿೃಂಗೇರಿ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ
ಈಗಿನಂತೆ ಮಲೆನಾಡು ಭಾಗಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಒಳನಾಡು : ಉತ್ತರ ಒಳನಾಡಿನ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದ್ದು, ದಕ್ಷಿಣ ಒಳನಾಡಿನ ಚಾಮರಾಜನಗರ, ರಾಮನಗರ, ಬೆಂಗಳೂರು ದಕ್ಷಿಣ ಹಾಗೂ ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ದಕ್ಷಿಣ ಒಳನಾಡಿನಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಎಪ್ರಿಲ್ 21ರಿಂದ ಉತ್ತರ ಒಳನಾಡಿನಲ್ಲೂ ಮಳೆಯ ಮುನ್ಸೂಚನೆ ಇದೆ. 

12 April 2025

13.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


13.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗಿನೊಂದಿಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಆದರೆ ಅರಬ್ಬಿ ಸಮುದ್ರ ಕಡೆಯಿಂದ ಬೀಸುವ ಗಾಳಿಯ ಪ್ರಭಾವ ಹೆಚ್ಚಿರುವುದರಿಂದ ಮೋಡಗಳು ಪೂರ್ವಕ್ಕೆ ಅಂದರೆ ಒಳನಾಡು ಕಡೆ ಚಲಿಸುತ್ತಿದೆ.
ಮುನ್ಸೂಚನೆ ಇದ್ದರೂ ಮಳೆಯ ಸಾಧ್ಯತೆ ಕಡಿಮೆ ಇರಬಹುದು. ಚಲಿಸುವ ಮೋಡಗಳಿಂದ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ. 
ಈಗಿನಂತೆ ಎಪ್ರಿಲ್ 13ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು ಅಲ್ಲಲ್ಲಿ ಸಾಮಾನ್ಯ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಎಪ್ರಿಲ್ 13ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಗಳಿವೆ. 

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ದಾವಣಗೆರೆ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಗಾಳಿಯ ಒತ್ತಡ ಹೆಚ್ಚಿದ್ದರೆ ಬಳ್ಳಾರಿ ಜಿಲ್ಲೆಯಲ್ಲೂ ಮಳೆ ಸಾಧ್ಯತೆ ಇದೆ. 
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಎಪ್ರಿಲ್ 13ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸುವ ಲಕ್ಷಣಗಳಿವೆ. 

ಟೈಮ್ಸ್ ಆಫ್ ಇಂಡಿಯಾ ವರದಿಯಂತೆ ಲಾನಿನಾ ಅವಧಿ ಮುಕ್ತಾಯದ ಹಂತದಲ್ಲಿದೆ. 
ಪೆಸಿಫಿಕ್ ಸಾಗರದ ಮೇಲ್ಮೈ ಉಷ್ಣತೆ ತೀರ ಬಿಸಿಯೂ ಅಲ್ಲ ಅಥವಾ ತೀರ ತಣ್ಣನೆಯೂ ಅಲ್ಲದ ತಟಸ್ಥ ಸ್ಥಿತಿಗೆ ತಲಪುವ ನಿರೀಕ್ಷೆಯಿದೆ. 
ಇದರಿಂದ 2025ನೇ ಸಾಲಿನ ನಮ್ಮ ಮುಂಗಾರು ಸಾಮಾನ್ಯವಿರುವ ಸಾಧ್ಯತೆ ಇದೆ.

https://timesofindia.indiatimes.com/india/la-nina-over-india-unlikely-to-see-drought-or-extreme-rain/articleshow/120221899.cms

19.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ರಾಜ...