Advertise

06 April 2025

07.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

07.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ ಇದ್ದು, ಸುಳ್ಯ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತ ಒಂದೆರಡು ಕಡೆ ಗುಡುಗು ಹಾಗೂ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಂದೆರಡು ಕಡೆ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ಎಪ್ರಿಲ್ 7ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದು, ಎಪ್ರಿಲ್ 9 ಅಥವಾ 10ರಿಂದ ಮತ್ತೆ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಮಲೆನಾಡು : ಕೊಡಗು ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಹಾಸನ ಜಿಲ್ಲೆಯ ಸಕಲೇಶಪುರ ಸುತ್ತಮುತ್ತ ತುಂತುರು ಮಳೆಯ ಮುನ್ಸೂಚೆನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಎಪ್ರಿಲ್ 7 ಹಾಗೂ 8ರಂದು ಮಳೆಯ ಪ್ರಮಾಣವು ಕಡಿಮೆಯಾಗಿದ್ದು 9ರಿಂದ ಮತ್ತೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಒಳನಾಡು : ಉತ್ತರ ಒಳನಾಡಿನ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದು, ದಕ್ಷಿಣ ಒಳನಾಡಿನಲ್ಲಿ ಸಂಜೆ, ರಾತ್ರಿ ಚಾಮರಾಜನಗರದ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ
ಈಗಿನಂತೆ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದ್ದು, ದಕ್ಷಿಣ ಒಳನಾಡಿನಲ್ಲಿ ಎಪ್ರಿಲ್ 7ರಿಂದ ಒಣಹವೆ ಆವರಿಸುವ ಸಾಧ್ಯತೆಗಳಿವೆ. ಎಪ್ರಿಲ್ 10ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

No comments:

Post a Comment

12.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

12.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ರಾಜ...