ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಧರ್ಮಸ್ಥಳ ಸುತ್ತಮುತ್ತ ಸಂಜೆ, ರಾತ್ರಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಕರಾವಳಿಯಲ್ಲಿ ಎಪ್ರಿಲ್ 9ರಿಂದ ಅಲ್ಲಲ್ಲಿ ಸಾಧಾರಣ ಮಳೆಯ ಸಾಧ್ಯತೆಗಳಿವೆ.
ಮಲೆನಾಡು : ಕೊಡಗು ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮೋಡ ಸ್ವಲ್ಪ ಜಾಸ್ತಿ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಎಪ್ರಿಲ್ 9ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ.
ಒಳನಾಡು : ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ.
ಈಗಿನಂತೆ ಎಪ್ರಿಲ್ 10ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದರಿಂದ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಮಾಣವು ಕಡಿಮೆಯಾಗಿದ್ದರಿಂದ ಮಳೆಯ ಪ್ರಮಾಣವೂ ಕಡಿಮೆಯಾಗಿದೆ.
ಇನ್ನೆರಡು ದಿನಗಳಲ್ಲಿ ವಾಯುಭಾರ ಕುಸಿತ ಚಲಿಸುವ ದಿಕ್ಕಿನ ಸ್ಪಷ್ಟತೆ ಸಿಗಬಹುದು.
No comments:
Post a Comment