Advertise

10 April 2025

11.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


11.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಮಾತ್ರ ಮಳೆಯ ಮುನ್ಸೂಚೆನೆ ಇದ್ದರೂ ಗಾಳಿಯ ಪ್ರಭಾವದಿಂದ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.
ಈಗಿನಂತೆ ಎಪ್ರಿಲ್ 18ರ ತನಕವೂ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ಈಗಿನಂತೆ ಎಪ್ರಿಲ್ 18ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವದಿಂದ ಇತರ ಜಿಲ್ಲೆಗಳಲ್ಲಿಯೂ ಮಳೆಯ ಸಾಧ್ಯತೆ ಇದೆ. ( ಗಾಳಿಯ ದಿಕ್ಕು ಹಾಗೂ ಪ್ರಭಾವ ತಿಳಿಯಲು ಸಾಧ್ಯವಿಲ್ಲ).
ದಕ್ಷಿಣ ಒಳನಾಡಿನ ಮೈಸೂರು ಉತ್ತರ, ತುಮಕೂರು(ಪಾವಗಢ ಸಹಿತ), ಚಿಕ್ಕಬಳ್ಳಾಪುರ, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಎಪ್ರಿಲ್ 12ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಲಕ್ಷಣಗಳಿವೆ. 

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ದುರ್ಬಲಗೊಂಡಿದ್ದು, ಇವತ್ತು, ರಾತ್ರಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದರ ಪರಿಣಾಮದಿಂದ ಮುಂದಿನ 2, 3 ದಿವಸಗಳ ಕಾಲ ಅರಬ್ಬಿ ಸಮುದ್ರ ಕಡೆಯಿಂದ ಅಂದರೆ ಪಶ್ಚಿಮದ ಗಾಳಿಯ ಪ್ರಭಾವ ಹೆಚ್ಚಾಗುವ ಸಾಧ್ಯತೆಗಳಿದ್ದು ಒಳನಾಡು ಭಾಗಗಳಲ್ಲಿ ಮಳೆ ಕ್ಷೀಣಿಸುವ ಸಾಧ್ಯತೆಗಳಿವೆ. 

No comments:

Post a Comment

08.02.2026 ರಿಂದ 14.02.2026ರ ತನಕದ ಕರ್ನಾಟಕ ಹವಾಮಾನ ವರದಿ

08.02.2026ರಿಂದ 14.02.2026ರ ತನಕದ ಕರ್ನಾಟಕ ಹವಾಮಾನ ವರದಿ : ರಾಜ್ಯದಾದ್ಯಂತ ಈ ವಾರ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ ಹಾಗೂ...