ಕರಾವಳಿ : ಕಾಸರಗೋಡು ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಹಾಗೂ ಕೇರಳ ಗಡಿ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಇಲ್ಲಿ ಗಾಳಿಯ ಪಾತ್ರ ಮಹತ್ವದ್ದಾಗಿದೆ. ಗಾಳಿಯ ಒತ್ತಡ ಹೆಚ್ಚಿದ್ದರೆ ಇತರ ಭಾಗಗಳಲ್ಲಿಯೂ ಮಳೆಯ ಸಾಧ್ಯತೆ ಇದೆ. ಉಡುಪಿ, ದ. ಕ. ಗಡಿ ಭಾಗಗಳಲ್ಲಿಯೂ ಮಳೆಯ ಸಾಧ್ಯತೆ ಇದೆ. ಉಳಿದ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಎಪ್ರಿಲ್ 19ರ ತನಕ ಮಳೆಯ ಪ್ರಮಾಣ ತುಂಬಾ ಕಡಿಮೆಯಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಹಾಸನ ಅಲ್ಲಲ್ಲಿ ಮೋಡದ ವಾತಾವರಣ ಹಾಗೂ ಸಕ್ಲೇಶ್ಪುರ ಸುತ್ತಮುತ್ತ ತುಂತುರು ಮಳೆಯ ಸಾಧ್ಯತೆಗಳದ್ದು, ಚಿಕ್ಕಮಗಳೂರಿನ ಶಿೃಂಗೇರಿ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ
ಈಗಿನಂತೆ ಮಲೆನಾಡು ಭಾಗಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದ್ದು, ದಕ್ಷಿಣ ಒಳನಾಡಿನ ಚಾಮರಾಜನಗರ, ರಾಮನಗರ, ಬೆಂಗಳೂರು ದಕ್ಷಿಣ ಹಾಗೂ ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ದಕ್ಷಿಣ ಒಳನಾಡಿನಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಎಪ್ರಿಲ್ 21ರಿಂದ ಉತ್ತರ ಒಳನಾಡಿನಲ್ಲೂ ಮಳೆಯ ಮುನ್ಸೂಚನೆ ಇದೆ.
No comments:
Post a Comment