Advertise

17 April 2025

18.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸೆಖೆ ಸ್ವಲ್ಪ ಜಾಸ್ತಿಯೇ ಇರಲಿದೆ. 
ಈಗಿನಂತೆ ಎಪ್ರಿಲ್ 20ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಮಲೆನಾಡು : ಕೊಡಗು ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮೊಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ  ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 
ಈಗಿನಂತೆ ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿಯಲಿದ್ದು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. ಎಪ್ರಿಲ್ 19 ಅಥವಾ 20 ರಿಂದ ಮಳೆ ಆರಂಭವಾಗುವ ಸಾಧ್ಯತೆಗಳಿವೆ. 

ಒಳನಾಡು : ಉತ್ತರ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ದಕ್ಷಿಣ ಒಳನಾಡಿನ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. 
ಈಗಿನಂತೆ ಎಪ್ರಿಲ್ 20ರಿಂದ ದಕ್ಷಿಣ ಒಳನಾಡು ಹಾಗೂ 21 ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. 

2025ನೇ ಸಾಲಿನ ಭಾರತೀಯ ಹವಾಮಾನ ಇಲಾಖೆಯ ಮುಂಗಾರು ಪ್ರಥಮ ಸುತ್ತಿನ ( ಜೂನ್ - ಸೆಪ್ಟೆಂಬರ್ ) ವರದಿ ಪ್ರಕಟಿಸಲಾಗಿದ್ದು, ರಾಜ್ಯದಲ್ಲಿ ಸಾಮಾನ್ಯ ಮುಂಗಾರು ಇರುವ ಸಾಧ್ಯತೆಗಳನ್ನು ಹೇಳುತ್ತಿದೆ. 

No comments:

Post a Comment

19.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ರಾಜ...