ಕರಾವಳಿ : ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಸಂಜೆ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚೆನೆ ಇದೆ. ಗಾಳಿಯ ಪ್ರಭಾವ ಹಾಗೂ ಒತ್ತಡ ಹೆಚ್ಚಿದ್ದರೆ ಕಾಸರಗೋಡು ಜಿಲ್ಲೆಯಲ್ಲೂ ಮತ್ತು ದ. ಕ. ಉಳಿದ ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಉಡುಪಿ ಜಿಲ್ಲೆಯಲ್ಲಿ ಈಗಾಗಲೇ ಮೋಡದ ವಾತಾವರಣ ಉಂಟಾಗಿದ್ದು, ಸಂಜೆ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಉಳಿದ ಭಾಗಗಳಲ್ಲಿಯೂ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಈಗಾಗಲೇ ಮೋಡದ ವಾತಾವರಣ ಇದ್ದು, ಮಳೆಯ ಸಾಧ್ಯತೆಗಳು ಕಡಿಮೆಯಾಗುತ್ತಿದೆ.
ಈಗಿನಂತೆ ಕರಾವಳಿ ಭಾಗಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಮಲೆನಾಡು : ಕೊಡಗಿನ ಬಹುತೇಕ ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಹಾಸನದ ಸಕ್ಲೇಶ್ಪುರ ಸುತ್ತಮುತ್ತ, ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶಿೃಂಗೇರಿ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಸಂಜೆ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಈಗಾಗಲೇ ಮೋಡ ವಾತಾವರಣ ಇದ್ದು, ಗದಗ, ಬಳ್ಳಾರಿ, ದಾವಣಗೆರೆ ಕೊಪ್ಪಳ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಇಲ್ಲಿ ಗಾಳಿಯ ಪಾತ್ರ ಮಹತ್ವದ್ದಾಗಿದೆ.
ದಕ್ಷಿಣ ಒಳನಾಡಿನ ಮೈಸೂರು, ಬೆಂಗಳೂರು ಹಗೂ ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಇತರ ಭಾಗಗಳಲ್ಲಿಯೂ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಈಗಿನಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.
No comments:
Post a Comment