30.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಅರಬ್ಬಿ ಸಮುದ್ರದ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವದಿಂದ ಕಾಸರಗೋಡು ಅಲ್ಲಲ್ಲಿ, ಮಂಗಳೂರು ಹಾಗೂ ಬಂಟ್ವಾಳ ತಾಲೂಕುಗಳ ಕೆಲವು ಭಾಗಗಳಲ್ಲಿ ಮುಂಜಾನೆ ಮಳೆಯಾಗಿದ್ದು, ಇವತ್ತು ಸಹ ಅದೇ ರೀತಿಯ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಪುತ್ತೂರು, ಸುಳ್ಯ, ಕಡಬ, ಬೆಳ್ತಂಗಡಿ, ಮೂಡಬಿದರೆ ತಾಲೂಕುಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.
ಉಡುಪಿ ಜಿಲ್ಲೆಯ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 6ರಿಂದ ಹೆಚ್ಚಾಗುವ ನಿರೀಕ್ಷೆ ಇದೆ.
ಮಲೆನಾಡು : ಕೊಡಗು ಜಿಲ್ಲೆಯ ಒಂದೆರಡು ಕಡೆ, ಹಾಸನದ ಸಕ್ಲೇಶ್ಪುರ ಸುತ್ತಮುತ್ತ, ಚಿಕ್ಕಮಗಳೂರನ ಮೂಡಿಗೆರೆ, ಬಾಳೆಹೊನ್ನೂರು, ಶಿೃಂಗೇರಿ, ಕುದುರೆಮುಖ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ( ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ) ಮಳೆ ಮುಂದುವರಿಯುವ ಲಕ್ಷಣಗಳಿವೆ. ಶಿವಮೊಗ್ಗ ಜಿಲ್ಲೆಯಲ್ಲಿ ಮೇ 6ರಿಂದ ಮಳೆ ಹೆಚ್ಚಾಗುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಮಳೆಯ ಸಾಧ್ಯತೆಗಳು ಕಡಿಮೆಯಾಗುತ್ತಿದೆ.
ದಕ್ಷಿಣ ಒಳನಾಡಿನ ಚಿತ್ರದುರ್ಗ ಒಂದೆರಡು ಕಡೆ ಹಾಗೂ ಮೈಸೂರು ಒಂದೆರಡು ಕಡೆ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉಳಿದ ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ದಕ್ಷಿಣ ಒಳನಾಡಿನಲ್ಲಿ ಮೇ 1ರಿಂದ ಹಾಗೂ ಉತ್ತರ ಒಳನಾಡಿನಲ್ಲಿ ಮೇ 5ರಿಂದ ಮಳೆ ಆರಂಭವಾಗುವ ಲಕ್ಷಣಗಳಿವೆ.
No comments:
Post a Comment