Advertise

31 May 2025

01.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

01.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಉಡುಪಿ ಹಾಗೂ ಉತ್ತರ ಕನ್ನಡ ತೀರ ಭಾಗಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ತುಂಬಾ ಕಡಿಮೆಯಾಗಿದ್ದು, ಜೂನ್ 4ರ ತನಕ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ. ನಂತರ ಬಿಸಿಲು ಹಾಗೂ ಮೋಡದ ವಾತಾವರಣ ಇರಬಹುದು.

ಮಲೆನಾಡು : ಕೊಡಗು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದ್ದರೆ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿವೆ.

ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಮುನ್ಸೂಚೆನೆ ಇದೆ.
ಈಗಿನಂತೆ ರಾಜ್ಯದ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸಿದ್ದು, ಜೂನ್ 5ರಿಂದ ದಕ್ಷಿಣ ಒಳನಾಡಿನ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. 

ಮುಂಗಾರು ಬಲಗೊಳ್ಳಲು ಸಮಯ ಬೇಕಾಗಬಹುದು. 

29 May 2025

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಮೇ 30ರ ತನಕ ಉತ್ತರ ಕನ್ನಡ ಸಾಮಾನ್ಯ ಹಾಗೂ ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಉತ್ತಮ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. ಮೇ 31ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಜೂನ್ 1ರಿಂದ ಮಳೆ ಮತ್ತಷ್ಟು ಕ್ಷೀಣಿಸುವ ಸಾಧ್ಯತೆಗಳಿದ್ದು, ಜೂನ್ 4ರಿಂದ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಬೆಳೆಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಶಿವಮೊಗ್ಗ ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಮೇ 30ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಮುನ್ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮೇ 31ರಿಂದ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಬೆಳೆಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು. 

ಒಳನಾಡು : ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಗದಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಮಹಾರಾಷ್ಟ್ರ ಗಡಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ರಾಯಚೂರು, ಯಾದಗಿರಿ, ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ದಕ್ಷಿಣ ಒಳನಾಡಿನ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಉತ್ತಮ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಬಂಗ್ಲಾದೇಶದ ಕರಾವಳಿ ಮೂಲಕ ಭೂ ಪ್ರವೇಶಿಸಿದ್ದು, ಅಲ್ಲೇ ಶಿಥಿಲಗೊಳ್ಳುವ ಲಕ್ಷಣಗಳಿವೆ. 
ಇದರೊಂದಿಗೆ ಮುಂಗಾರು ಮಾರುತಗಳು ದುರ್ಬಲವಾಗುವ ಸಾಧ್ಯತೆ ಕಾಣಿಸುತ್ತಿದೆ. 
ಮುಂದಿನ 2 ದಿವಸಗಳಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಬಹುತೇಕ ಭಾಗಗಳಲ್ಲಿ ಬಿಸಿಲಿನ ಜೊತೆಗೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 


28 May 2025

29.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


29.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಮೇ 29 ಹಾಗೂ 30ರಂದು ಉತ್ತರ ಕನ್ನಡ ಸಾಮಾನ್ಯ ಇದ್ದರೆ, ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚೆನೆ ಇದೆ. 31ರಿಂದ ಕಡಿಮೆಯಾಗಿ ಜೂನ್ 3ರ ತನಕ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ನಂತರ ಮಳೆಯ ಪ್ರಮಾಣ ತೀರಾ ಕಡಿಮೆಯಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮೇ 29ರಂದು ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚೆನೆ ಇದೆ. ಮೇ 30ರಂದು ಕೊಡಗು ಜಿಲ್ಲೆಯಲ್ಲಿ ಮಾತ್ರ ಭಾರಿ ಮಳೆಯ ಮುನ್ಸೂಚೆನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮೇ 31ರಿಂದ ಮಳೆಯ ಪ್ರಮಾಣ ಗಣನೀಯವಾಗಿ ಕಡಿಮೆಯಾಗುವ ಲಕ್ಷಣಗಳಿವೆ. 

ಒಳನಾಡು : ಉತ್ತರ ಒಳನಾಡಿನ ಹಾವೇರಿ, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ ದಾವಣಗೆರೆ, ಬಳ್ಳಾರಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಈಗಿನಂತೆ  ಮೇ 29ರಂದು ಉತ್ತರ  ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು, 30ರಂದು ಉತ್ತರ ಒಳನಾಡು ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಮೇ 31ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ. 

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಾಳೆ ಬಂಗ್ಲಾ ದೇಶದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಗಳಿವೆ. 

27 May 2025

28.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


28.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಮುನ್ಸೂಚೆನೆ ಇದ್ದರೂ ತೀವ್ರತೆ ಸ್ವಲ್ಪ ಕಡಿಮೆಯಾಗಲಿದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಮೇ 28 ರಿಂದ ಮತ್ತೆ ಮಳೆ ಚುರುಕಾಗುವ ಲಕ್ಷಣಗಳಿದ್ದು, ಜೂನ್ 3ರ ತನಕ ಮುಂದುವರಿಯುವ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯಲ್ಲೂ ಮಳೆಯ ತೀವ್ರತೆ ಕಡಿಮೆಯಾಗುವ ಮುನ್ಸೂಚನೆ ಇದ್ದರೂ ಭಾಗಮಂಡಲ, ತಲಕಾವೇರಿ ಸುತ್ತಮುತ್ತ ಹಾಗೂ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆ ಸ್ವಲ್ಪ ಜಾಸ್ತಿ ಇರಬಹುದು. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮೇ 28ರಿಂದ ಮುಂಗಾರು ಮತ್ತೆ ಚುರುಕಾದರೂ ಜೂನ್ 1ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯಪುರ, ಕೊಪ್ಪಳ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಹಾವೇರಿ ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಮಾತ್ರ ಇರಬಹುದು.
ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮೈಸೂರು ಜಿಲ್ಲೆಯ ಕೊಡಗು ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮೇ 28ರಿಂದ 2 ದಿವಸಗಳ ಕಾಲ ಉತ್ತರ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ ಇದ್ದು, ನಂತರ ಬಿಸಿಲಿನ ಅವಧಿ ಹೆಚ್ಚಿರಬಹುದು.

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ 4 ದಿನಗಳಲ್ಲಿ ಶಿಥಿಲಗೊಳ್ಳುತ್ತಿದ್ದಂತೆಯೇ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆಗಳಿವೆ. ಜೂನ್ ಮೊದಲವಾರದಲ್ಲಿ ರಾಜ್ಯದಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ. 

24 May 2025

26.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


26.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಇವತ್ತು ರಾಜ್ಯದಾದ್ಯಂತ ಮುಂಗಾರು ಮಳೆ ಉತ್ತಮವಾಗಿ ಆರಂಭವಾಗಿದೆ.

ಮಹಾರಾಷ್ಟ್ರದ ಕರಾವಳಿ ತಲುಪಿರುವ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದರೂ ಅಲ್ಪ ಪ್ರಮಾಣದಲ್ಲಿ ತಿರುಗುತ್ತಿದ್ದು, ಭೂ ಪ್ರವೇಶಿಸಿ ಮಧ್ಯಪ್ರದೇಶ ತನಕ ಸಾಗುವ ನಿರೀಕ್ಷೆ ಇದೆ.
ಇದರ ಪರಿಣಾಮದಿಂದ ಮುಂಗಾರು ಕೇರಳದಿಂದ ಮಹಾರಾಷ್ಟ್ರ ತನಕವೂ ಒಮ್ಮೆಲೇ ಆರಂಭವಾಗಿದೆ.
ರಾಜ್ಯದಾದ್ಯಂತ ಅಬ್ಬರಿಸಲಿರುವ ಮುಂಗಾರು ಮಳೆಯು ಈ ತಿಂಗಳ ಕೊನೆಯ ತನಕ ಮುಂದುವರಿದು, ವಾಯುಭಾರ ಕುಸಿತವು ಸಂಪೂರ್ಣ ಶಿಥಿಲಗೊಳ್ಳುತ್ತಿದ್ದಂತೆಯೇ ಅಂದರೆ ಜೂನ್ 2 ಅಥವಾ 3ರಿಂದ ಅಲ್ಪ ಅವಧಿಯ ಬಿಡುವು ಪಡೆಯುವ ಸಾಧ್ಯತೆಗಳಿವೆ.
ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಬೆಳೆಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು.
ರಾಜ್ಯದ ಕರಾವಳಿ ಜಿಲ್ಲೆಗಳಾದ್ಯಂತ ಹಾಗೂ ಮಲೆನಾಡು ಭಾಗಗಳಲ್ಲಿ ಮೇ 25ರಿಂದ 30ರ ತನಕ ಭಾರಿ ಮಳೆಯ ಮುನ್ಸೂಚೆನೆ ಇದೆ.
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮುಂದಿನ 2 ಅಥವಾ 3 ದಿನಗಳ ಕಾಲ Red alert ಘೋಷಣೆಯ ಸಾಧ್ಯತೆ ಇದೆ.

23 May 2025

24.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಸ್ವಲ್ಪ ಜಾಸ್ತಿ ಇರಬಹುದು.
ಈಗಿನಂತೆ ಮುಂದಿನ 10 ದಿನಗಳವರೆಗೂ ಉತ್ತಮ ಮಳೆಯ ಮುನ್ಸೂಚೆನೆ ಇದೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮೇ 24ರಿಂದ ಮುಂದಿನ 10 ದಿನಗಳವರೆಗೂ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ.

ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ, ರಾಯಚೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಬಳ್ಳಾರಿ, ದಾವಣಗೆರೆ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ಮೇ 31ರ ತನಕವೂ ಉತ್ತರ ಒಳನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ದಕ್ಷಿಣ ಒಳನಾಡು ಭಾಗಗಳಲ್ಲಿ ಮೇ 24ರಿಂದ ಮುಂದಿನ 10 ದಿನಗಳವರೆಗೂ ಮಳೆಯ ಮುನ್ಸೂಚನೆ ಇದೆ. 

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಇವತ್ತು ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದರ ಪರಿಣಾಮದಿಂದ ಮುಂಗಾರು ಚುರುಕಾಗಿದ್ದು, ಮುಂದಿನ 10 ದಿನಗಳವರೆಗೂ ಮುಂಗಾರು ಮಳೆ ರಾಜ್ಯದಲ್ಲಿ ಉತ್ತಮಾವಾಗಿರಲಿದೆ. ಜೂನ್ ಮೊದಲ ವಾರದಲ್ಲಿ ರಾಜ್ಯದಲ್ಲಿ ಮುಂಗಾರು ಮಳೆಯ ತೀವ್ರತೆ ಸ್ವಲ್ಪ ಕಡಿಮೆಯಾಗುವ ಲಕ್ಷಣಗಳಿವೆ.
ಮೇ 27ರಂದು ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. 

22 May 2025

23.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

23.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಮಧ್ಯಾಹ್ನ ನಂತರ ಅಲ್ಲಲ್ಲಿ ಸಣ್ಣ ಪ್ರಮಾಣದ ಮಳೆಯ ಸಾಧ್ಯತೆ ಇದೆ. ತಡ ರಾತ್ರಿ ಕರಾವಳಿ ತೀರ ಭಾಗಗಳಲ್ಲಿ ಮುಂಗಾರು ಮಳೆ ಆರಂಭವಾಗುವ ಸಾಧ್ಯತೆಗಳಿದ್ದು, ನಾಳೆ ಕರಾವಳಿ ಜಿಲ್ಲೆಗಳ ಇತರ ಭಾಗಗಳಿಗೂ ವ್ಯಾಪಿಸುವ ಮುನ್ಸೂಚನೆ ಇದೆ.
ಈಗಿನಂತೆ ಮೇ ಕೊನೆಯ ತನಕವೂ ಉತ್ತಮ ಮಳೆಯ ಮುನ್ಸೂಚೆನೆ ಇದೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ.
ಈಗಿನಂತೆ ಮೇ 23ರಿಂದ ಮುಂಗಾರು ಉತ್ತಮವಾಗಿ ಆರಂಭವಾಗಲಿದೆ. 

ಒಳನಾಡು : ಉತ್ತರ ಒಳನಾಡಿನ ಮಹಾರಾಷ್ಟ್ರ ಗಡಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ.
ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ಉತ್ತರ ಒಳನಾಡಿನಲ್ಲಿ ಮೇ 23ರಿಂದ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮೇ 24ರಿಂದ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಉತ್ತರ ಮಹಾರಾಷ್ಟ್ರ ಕರಾವಳಿ ತಲುಪಿದ್ದು, ಇನ್ನೆರಡು ದಿನಗಳಲ್ಲಿ ಅಲ್ಲೆ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದರೊಂದಿಗೆ ಮುಂಗಾರು ಮಾರುತಗಳು ಪ್ರಭಲಗೊಳ್ಳುತ್ತಿವೆ.
ಮೇ 26 ಅಥವಾ 27ರಂದು ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳದ ಕರಾವಳಿ ಸಮೀಪ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. 

21 May 2025

22.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

22.05.225ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಮಳೆ ಸ್ವಲ್ಪ ಜಾಸ್ತಿ ಇರವ ಮುನ್ಸೂಚನೆ ಇದೆ.
ಈಗಿನಂತೆ ಮೇ 22ರ ತನಕ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾದರೂ 23ರಿಂದ ಮುಂಗಾರು ಉತ್ತಮವಾಗಿ ಆರಂಭವಾಗಲಿದೆ.

ಮಲೆನಾಡು :  ಕೊಡಗು, ಹಾಸನ ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು  ಜಿಲ್ಲೆಯಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಮೇ23ರಿಂದ ಮಳೆ ಹೆಚ್ಚಾಗುವ ಲಕ್ಷಣಗಳಿದ್ದು, ಮುಂಗಾರು ಉತ್ತಮವಾಗಿ ಆರಂಭವಾಗಲಿದೆ. 

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಹಾಗೂ ಬಳ್ಳಾರಿಯ ಆಂದ್ರಾ ಗಡಿಭಾಗಗಳಲ್ಲಿ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 
ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಜಿಲ್ಲೆಗಳ ಆಂದ್ರಾ ಗಡಿ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 
ಈಗಿನಂತೆ ಮೇ 24ರಿಂದ ಮುಂಗಾರು ಮಳೆ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿಯೂ ಆರಂಭವಾಗುವ ಲಕ್ಷಣಗಳಿವೆ. 

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಮೇ 23 ಅಥವಾ 24ರಂದು ಗುಜರಾತ್ ಕರಾವಳಿ ಸಮೀಪ ತಲಪುವ ನಿರೀಕ್ಷೆ ಇದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ ಸಾಧ್ಯತೆಯೂ ಇದೆ. ಇದರ ಪರಿಣಾಮದಿಂದ ಮುಂಗಾರು ಚುರುಕಾಗಿದ್ದು, ಈ ವಾಯುಭಾರ ಕುಸಿತವು ಸಂಪೂರ್ಣ ಶಿಥಿಲಗೊಳ್ಳುತ್ತಿದ್ದಂತೆಯೇ ಮುಂಗಾರು ಸ್ವಲ್ಪ ದುರ್ಬಲಗೊಳ್ಳುವ ಸಾಧ್ಯತೆಗಳಿವೆ. 

20 May 2025

21.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

21.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಮುಂಗಾರು ರೀತಿಯ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚೆನೆ ಇದೆ. 
ಈಗಿನಂತೆ ಮೇ 21ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ. ಆದರೆ 24 ಅಥವಾ 25ರಿಂದ ಮಳೆ ಹೆಚ್ಚಾಗುವ ಸೂಚನೆಗಳಿವೆ. 

ಮಲೆನಾಡು : ಕೊಡಗು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚೆನೆ ಇದೆ. 
ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳ ಹಲವು ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. 
ಈಗಿನಂತೆ ಮೇ 21ರಿಂದ ಮಳೆಯ ಪ್ರಮಾಣ ಇಳಿಕೆಯಾಗದರೂ 24ರಿಂದ 2 ಅಥವಾ 3 ದಿನಗಳ ಕಾಲ ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ. 

ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಗದಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಬಾಗಲಕೋಟೆ, ರಾಯಚೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು. 
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ದಕ್ಷಿಣ ಒಳನಾಡಿನಲ್ಲಿ ಮೇ 21ರಿಂದ ಹಾಗೂ ಉತ್ತರ ಒಳನಾಡಿನಲ್ಲಿ ಮೇ 22ರಿಂದ ಮಳೆಯ ಪ್ರಮಾಣ ಇಳಿಕೆಯಾಗಲಿದೆ. 

ಅರಬ್ಬಿ ಸಮುದ್ರದ ವಾಯುಭಾರ ಕುಸಿತದ ಪರಿಣಾಮದಿಂದ ಕರಾವಳಿಯಲ್ಲಿ ಅರಬ್ಬಿ ಸಮುದ್ರದ ಮೋಡಗಳಿಂದ ಮಳೆಯಾಗುತ್ತಿದ್ದರೆ, ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ಬಂಗಾಳ ಕೊಲ್ಲಿಯ ಭಾಗದಿಂದ ಮೋಡಗಳು ಪಶ್ಚಿಮಕ್ಕೆ ಸೆಳೆಯಲ್ಪಡುವುದರಿಂದ ಮಳೆಯಾಗುತ್ತಿದೆ. 

19 May 2025

20.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮೇ 21ರ ತನಕ ವಾಯುಭಾರ ಕುಸಿತದ ಮಳೆಯಾಗಲಿದ್ದು, ನಂತರ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಮೇ 24ರಿಂದ ಮುಂಗಾರು ಮಳೆ ಉತ್ತಮವಾಗಿ ಆರಂಭವಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮೇ 20ರ ತನಕ ಕೊಡಗು ಹಾಗೂ 21ರ ತನಕ ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ವಾಯುಭಾರ ಕುಸಿತದ ಮಳೆಯಾದರೆ. ಮೇ 24ರಿಂದ ಮುಂಗಾರಿನ ಉತ್ತಮ ಮಳೆಯ ನಿರೀಕ್ಷೆ ಇದೆ.

ಒಳನಾಡು : ರಾಜ್ಯದ ಉತ್ತರ ಒಳನಾಡು ಬಹುತೇಕ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನಲ್ಲೂ ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮೇ 21ರ ತನಕ ದಕ್ಷಿಣ ಒಳನಾಡು ಹಾಗೂ 22ರ ತನಕ ಉತ್ತರ ಒಳನಾಡು ಭಾಗಗಳಲ್ಲಿ ವಾಯುಭಾರ ಕುಸಿತದ ಮಳೆಯಾಗಲಿದ್ದು, ನಂತರ ಬಿಡುವು ಪಡೆದರೂ ಮೇ 24ರಿಂದ ಅಲ್ಲಲ್ಲಿ ಮುಂಗಾರು ಮಳೆ ಆರಂಭವಾಗುವ ಲಕ್ಷಣಗಳಿವೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದು, ಅರಬ್ಬಿ ಸಮುದ್ರದಲ್ಲಿ ಉತ್ತರ ಕೇರಳ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಲಿದೆ. ಮೇ 20ರಂದು ಕರ್ನಾಟಕ ಕರಾವಳಿ ಮೂಲಕ ಸಾಗಿ ಮೇ 25ರ ಸುಮಾರಿಗೆ ಗುಜರಾತ್ ಕರಾವಳಿ ತೀರ ತಲಪುವ ನಿರೀಕ್ಷೆಯಿದೆ. 

19.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


19.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಈಗಾಗಲೇ ಮುಂಜಾನೆ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮಳೆಯಾಗಿದ್ದು, ಮಧ್ಯಾಹ್ನ ನಂತರ, ಸಂಜೆ ಹಾಗೂ ರಾತ್ರಿ ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮೇ 19ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸೂಚನೆಗಳಿವೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಮಲೆನಾಡು ಭಾಗಗಳಲ್ಲಿಯೂ ಮೇ 19ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ.

ಒಳನಾಡು : ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚೆನೆ ಇದ್ದು, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚೆನೆ ಇದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ರಾಮನಗರ, ಮಂಡ್ಯ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿಯೂ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಮೇ 19ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ. 

ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮದಿಂದ ಮುಂಗಾರು ಆಗಮನ ನಿರೀಕ್ಷೆಗಿಂತಲೂ ಮೋದಲೆ ಆಗಲಿದೆ.
ಜೊತೆಗೆ ಅರಬ್ಬಿ ಸಮುದ್ರದಲ್ಲಿ ಮೇ 20ರ ನಂತರ ಉಂಟಾಗುವ ವಾಯುಭಾರ ಕುಸಿತವು ಮುಂಗಾರಿಗೆ ಮತ್ತಷ್ಟು ವೇಗ ನೀಡುವ ಸಾಧ್ಯತೆಗಳಿವೆ. 

17.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

17.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂಜಾನೆಯಿಂದಲೇ ತೀರ ಭಾಗಗಳಲ್ಲಿ ಅಲ್ಲಲ್ಲಿ ಮುಂಗಾರು ರೀತಿಯ ಮಳೆಯಾಗುತ್ತಿದ್ದು, ಮಧ್ಯಾಹ್ನ ನಂತರ, ಸಂಜೆ, ರಾತ್ರಿ ವೇಳೆ ಇತರ ಭಾಗಗಳಲ್ಲಿಯೂ ಗುಡುಗು ಸಹಿತ ಅಲ್ಲಲ್ಲಿ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. 
ಈಗಿನಂತೆ ಮುಂಗಾರು ರೀತಿಯ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡು ಬಹುತೇಕ ಭಾಗಗಳಲ್ಲಿಅ ಸಂಜೆ, ರಾತ್ರಿ ಗುಡುಗು, ಸಿಡಿಲು ಸಹಿತ ಮಳೆಯ ಮುನ್ಸೂಚೆನೆ ಇದೆ. ದಕ್ಷಿಣ ಒಳನಾಡು ಕೆಲವು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. 
ಈಗಿನಂತೆ ಮೇ 17ರಂದು ಸ್ವಲ್ಪ ಮಟ್ಟಿಗೆ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾದರೂ ಮೇ 19ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ. 

ಮೇ 20ರ ಸುಮಾರಿಗೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಲಕ್ಷಣಗಳಿದ್ದು ಇದರಿಂದ ಮುಂಗಾರು ಆಗಮನ ವೇಗ ಪಡೆದುಕೊಳ್ಳುವ ಸಾಧ್ಯತೆಗಳಿವೆ. ಮೇ 19ರಿಂದ ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ನಿರೀಕ್ಷೆ ಇದೆ. 

16 May 2025

16.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

16.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ ಮೋಡ ಹಾಗೂ ತುಂತುರು ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಈಗಾಗಲೇ ಮುಂಜಾನೆ ನಂತರ ಮಳೆಯಾಗಿದೆ. ದಕ್ಷಿಣ ಕನ್ನಡದ ಮಂಗಳೂರು ಸುತ್ತಮುತ್ತ ಭಾಗಗಳಲ್ಲಿಯೂ ಮುಂಜಾನೆ ನಂತರ ಮಳೆಯಾಗಿದೆ. ಇನ್ನು ಸಂಜೆ ಉಡುಪಿ ಹಾಗೂ ದಕ್ಷಿಣ ಕನ್ನಡದ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಂದೆರಡು ಕಡೆ ಮುಂಜಾನೆ ಸಾಮಾನ್ಯ ಮಳೆಯಾದ ವರದಿ ಯಾಗಿದೆ. ಸಂಜೆ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಮೇ 18 ಅಥವಾ 19ರಿಂದ ಮಳೆ ಜೋರಾಗುವ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು, ಹಾಸನ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ಈಗಾಗಲೇ ತುಂತುರು ಮಳೆಯಾಗಿದೆ.
ಈಗಿನಂತೆ ಮೇ 19ರಿಂದ ಮಳೆ ಹೆಚ್ಚಾಗುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ತುಮಕೂರು, ಮಂಡ್ಯ, ರಾಮನಗರ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಮುಂಗಾರು ಈಗಾಗಲೇ ಅಂಡಮಾನ್ ಪ್ರವೇಶಿಸಿದ್ದು, ಯಾವುದೇ ವಾಯುಭಾರ ಕುಸಿತಗಳು ಉಂಟಾಗದಿದ್ದರೆ, ಮೇ ಕೊನೆಯ ವಾರದಲ್ಲಿ ರಾಜ್ಯಕ್ಕೆ ಆಗಮಿಸುವ ನಿರೀಕ್ಷೆ ಇದೆ. 

14 May 2025

15.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

15.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಜಿಲ್ಲೆಯ ಅಲ್ಲಲ್ಲಿ, ಕೇರಳ - ದಕ್ಷಿಣ ಕನ್ನಡ ಗಡಿ ಭಾಗಗಳ ಅಲ್ಲಲ್ಲಿ, ಉಡುಪಿ, ದಕ್ಷಿಣ ಕನ್ನಡ ಘಟ್ಟದ ಕೆಳಗಿನ ಪ್ರದೇಶಗಳ ಅಲ್ಲಲ್ಲಿ, ಉತ್ತರ ಕನ್ನಡ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂಗಾರು ಪ್ರವೇಶದ ಪೂರ್ವ ಅಂದರೆ ಮುಂಗಾರು ಪ್ರಭಾವದಿಂದ ಮೇ18ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಲಕ್ಷಣಗಳಿವೆ. ಅಲ್ಲಿಯವರೆಗೆ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯಬಹುದು.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮೇ 15ರಿಂದ ಮಳೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಲಿದ್ದು, ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಒಳನಾಡು : ಉತ್ತರ ಒಳನಾಡಿನ ಬಳ್ಳಾರಿ, ರಾಯಚೂರು, ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ ಇದ್ದು, ಹಾವೇರಿ, ಧಾರವಾಡ, ಬೆಳಗಾವಿ, ದಾವಣಗೆರೆ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ತುಮಕೂರು (ಪಾವಗಢ ಸಹಿತ) ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಈಗಿನಂತೆ ಮೇ 21ರ ತನಕವೂ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಮುಂದುವರಿಯುವ ಸೂಚನೆಗಳಿವೆ.

ಮೇಲಿನ ವಿಡಿಯೋ ನಕ್ಷೆಯಲ್ಲಿ ಕಾಣುವಂತೆ ಗಾಳಿಯ ಯದ್ವಾತದ್ವಾ ಚಲನೆಯ ಕಾರಣದಿಂದ ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ ಅಂತ ಹೇಳಲು ಸಾಧ್ಯವಿಲ್ಲ. 

ಮುಂಗಾರು ಅವಧಿ ಪೂರ್ವ ಆಗಮನದ ನಿರೀಕ್ಷೆ ಇದ್ದು, ಈಗಾಗಲೇ ಅಂಡಮಾನ್ ಪ್ರವೇಶಿಸಿದ ಮುಂಗಾರು ಮೇ 25, 27ರಂದು ಕೇರಳ ಹಾಗೂ ಅದೇ ಸಮಯದಲ್ಲಿ ರಾಜ್ಯಕ್ಕೂ ಪ್ರವೇಶಿಸುವ ವರದಿಗಳಿವೆ.

12 May 2025

13.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

13.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಇವತ್ತು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ. 

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಒಳನಾಡು : ಉತ್ತರ ಒಳನಾಡಿನ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮೈಸೂರು, ಮಂಡ್ಯ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಹಾಗೂ ರಾಮನಗರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯ ನಿರೀಕ್ಷೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. 
ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ ಸಮುದ್ರ ಕಡೆಗೆ ಮುಂಗಾರು ಮಾರುತಗಳು ಪ್ರವೇಶಿಸುತ್ತಿರುವ ಲಕ್ಷಣಗಳಿವೆ. 

14.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

14.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ಕರ್...