ಕರಾವಳಿ : ಕಾಸರಗೋಡು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಸಂಜೆ, ರಾತ್ರಿ ಮೋಡ ಸ್ವಲ್ಪ ಹೆಚ್ಚಿದ್ದರೂ ಮಳೆಯ ಸಾಧ್ಯತೆ ಕಡಿಮೆ ಇರಬಹುದು. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಸುಬ್ರಮಣ್ಯ, ಕಡಬ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಪುತ್ತೂರು ತಾಲೂಕಿನ ಅಲ್ಲಲ್ಲಿ ಮಳೆಯ ಸಾಧ್ಯತೆಗಳವೆ.
ಈಗಿನಂತೆ ಮೇ 4ರಿಂದ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಅಲ್ಲಲ್ಲಿ ಮೋಡ ಹಾಗೂ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮೇ 4ರಿಂದ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.
ಒಳನಾಡು : ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ನಿನ್ನೆ ಅನಿರೀಕ್ಷಿತ ಮಳೆಯಾಗಿದೆ.
ಇವತ್ತು ದಾವಣಗೆರೆ, ಬಳ್ಳಾರಿ, ರಾಯಚೂರು, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, (ತುಮಕೂರು ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಉತ್ತರ ಒಳನಾಡಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಕೆಲವು ಭಾಗಗಳಲ್ಲಿ ಅನಿರೀಕ್ಷಿತ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಮುಂದುವರಿಯುವ ಸೂಚನೆಗಳಿವೆ.
No comments:
Post a Comment