Advertise

07 May 2025

08.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

08.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿಯ ಕಾರ್ಕಳ ಸುತ್ತಮುತ್ತ ಹಾಗೂ ಕರಾವಳಿಯ ಒಂದೆರಡು ಕಡೆ, ಉತ್ತರ ಕನ್ನಡದ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಕರಾವಳಿಯಲ್ಲಿ ಮೇ 11 ಅಥವಾ 12ರಿಂದ ಮಳೆ ಪುನರಾರಂಭಗೊಳ್ಳುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನದ ಸಕ್ಲೇಶ್ಪುರ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಹಾಗೂ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮಲೆನಾಡು ಭಾಗಗಳಲ್ಲಿ ಮೇ 11 ಅಥವಾ 12ರಿಂದ ಮತ್ತೆ ಮಳೆ ಪ್ರಾರಂಭವಾಗುವ ಸಾಧ್ಯತೆಗಳಿವೆ. 

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಜಿಲ್ಲೆಗಳ ಒಂದೆರಡು ಕಡೆ ಸಂಜೆ ಅಥವಾ ತುಂತುರು ಮಳೆಯ ಸಾಧ್ಯತೆಗಳಿದ್ದು, ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ತುಂತುರು ಮಾತ್ರ ಇರಬಹುದು. 
ಈಗಿನಂತೆ ಮೇ 10ನೇ ತಾರೀಕಿನ ನಂತರ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯಾಗುವ ನಿರೀಕ್ಷೆಗಳಿವೆ. 

2025ನೇ ಸಾಲಿನ ಮುಂಗಾರು ನಿರೀಕ್ಷೆಯಂತೆ ಸಮಯಕ್ಕೆ ಸರಿಯಾಗಿ ಅಂದರೆ ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಆಗಮಿಸುವ ವರದಿಗಳಿವೆ. 
ಮೇಲಿನ ಮೇ 12ರ ನಕ್ಷೆಯಲ್ಲಿ ಮುಂಗಾರು ರೀತಿಯ ಮಾರುತಗಳ ಚಲನೆಯನ್ನು ಗಮನಿಸಬಹುದು. 

No comments:

Post a Comment

18.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಉತ್ತಮ ಮಳೆ, ದ...