ಕರಾವಳಿ : ಕಾಸರಗೋಡು ಜಿಲ್ಲೆಯ ಅಲ್ಲಲ್ಲಿ, ಕೇರಳ - ದಕ್ಷಿಣ ಕನ್ನಡ ಗಡಿ ಭಾಗಗಳ ಅಲ್ಲಲ್ಲಿ, ಉಡುಪಿ, ದಕ್ಷಿಣ ಕನ್ನಡ ಘಟ್ಟದ ಕೆಳಗಿನ ಪ್ರದೇಶಗಳ ಅಲ್ಲಲ್ಲಿ, ಉತ್ತರ ಕನ್ನಡ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂಗಾರು ಪ್ರವೇಶದ ಪೂರ್ವ ಅಂದರೆ ಮುಂಗಾರು ಪ್ರಭಾವದಿಂದ ಮೇ18ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಲಕ್ಷಣಗಳಿವೆ. ಅಲ್ಲಿಯವರೆಗೆ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯಬಹುದು.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮೇ 15ರಿಂದ ಮಳೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಲಿದ್ದು, ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಬಳ್ಳಾರಿ, ರಾಯಚೂರು, ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ ಇದ್ದು, ಹಾವೇರಿ, ಧಾರವಾಡ, ಬೆಳಗಾವಿ, ದಾವಣಗೆರೆ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ತುಮಕೂರು (ಪಾವಗಢ ಸಹಿತ) ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಈಗಿನಂತೆ ಮೇ 21ರ ತನಕವೂ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಮುಂದುವರಿಯುವ ಸೂಚನೆಗಳಿವೆ.
ಮೇಲಿನ ವಿಡಿಯೋ ನಕ್ಷೆಯಲ್ಲಿ ಕಾಣುವಂತೆ ಗಾಳಿಯ ಯದ್ವಾತದ್ವಾ ಚಲನೆಯ ಕಾರಣದಿಂದ ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ ಅಂತ ಹೇಳಲು ಸಾಧ್ಯವಿಲ್ಲ.
ಮುಂಗಾರು ಅವಧಿ ಪೂರ್ವ ಆಗಮನದ ನಿರೀಕ್ಷೆ ಇದ್ದು, ಈಗಾಗಲೇ ಅಂಡಮಾನ್ ಪ್ರವೇಶಿಸಿದ ಮುಂಗಾರು ಮೇ 25, 27ರಂದು ಕೇರಳ ಹಾಗೂ ಅದೇ ಸಮಯದಲ್ಲಿ ರಾಜ್ಯಕ್ಕೂ ಪ್ರವೇಶಿಸುವ ವರದಿಗಳಿವೆ.
No comments:
Post a Comment