ಕಾಸರಗೋಡು ಅಲ್ಲಲ್ಲಿ ಮೋಡ ಹಾಗೂ ತುಂತುರು ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಈಗಾಗಲೇ ಮುಂಜಾನೆ ನಂತರ ಮಳೆಯಾಗಿದೆ. ದಕ್ಷಿಣ ಕನ್ನಡದ ಮಂಗಳೂರು ಸುತ್ತಮುತ್ತ ಭಾಗಗಳಲ್ಲಿಯೂ ಮುಂಜಾನೆ ನಂತರ ಮಳೆಯಾಗಿದೆ. ಇನ್ನು ಸಂಜೆ ಉಡುಪಿ ಹಾಗೂ ದಕ್ಷಿಣ ಕನ್ನಡದ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಂದೆರಡು ಕಡೆ ಮುಂಜಾನೆ ಸಾಮಾನ್ಯ ಮಳೆಯಾದ ವರದಿ ಯಾಗಿದೆ. ಸಂಜೆ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಮೇ 18 ಅಥವಾ 19ರಿಂದ ಮಳೆ ಜೋರಾಗುವ ಸಾಧ್ಯತೆಗಳಿವೆ.
ಮಲೆನಾಡು : ಕೊಡಗು, ಹಾಸನ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ಈಗಾಗಲೇ ತುಂತುರು ಮಳೆಯಾಗಿದೆ.
ಈಗಿನಂತೆ ಮೇ 19ರಿಂದ ಮಳೆ ಹೆಚ್ಚಾಗುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ತುಮಕೂರು, ಮಂಡ್ಯ, ರಾಮನಗರ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಮುಂಗಾರು ಈಗಾಗಲೇ ಅಂಡಮಾನ್ ಪ್ರವೇಶಿಸಿದ್ದು, ಯಾವುದೇ ವಾಯುಭಾರ ಕುಸಿತಗಳು ಉಂಟಾಗದಿದ್ದರೆ, ಮೇ ಕೊನೆಯ ವಾರದಲ್ಲಿ ರಾಜ್ಯಕ್ಕೆ ಆಗಮಿಸುವ ನಿರೀಕ್ಷೆ ಇದೆ.
No comments:
Post a Comment