ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂಜಾನೆಯಿಂದಲೇ ತೀರ ಭಾಗಗಳಲ್ಲಿ ಅಲ್ಲಲ್ಲಿ ಮುಂಗಾರು ರೀತಿಯ ಮಳೆಯಾಗುತ್ತಿದ್ದು, ಮಧ್ಯಾಹ್ನ ನಂತರ, ಸಂಜೆ, ರಾತ್ರಿ ವೇಳೆ ಇತರ ಭಾಗಗಳಲ್ಲಿಯೂ ಗುಡುಗು ಸಹಿತ ಅಲ್ಲಲ್ಲಿ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ.
ಈಗಿನಂತೆ ಮುಂಗಾರು ರೀತಿಯ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡು ಬಹುತೇಕ ಭಾಗಗಳಲ್ಲಿಅ ಸಂಜೆ, ರಾತ್ರಿ ಗುಡುಗು, ಸಿಡಿಲು ಸಹಿತ ಮಳೆಯ ಮುನ್ಸೂಚೆನೆ ಇದೆ. ದಕ್ಷಿಣ ಒಳನಾಡು ಕೆಲವು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಮೇ 17ರಂದು ಸ್ವಲ್ಪ ಮಟ್ಟಿಗೆ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾದರೂ ಮೇ 19ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.
ಮೇ 20ರ ಸುಮಾರಿಗೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಲಕ್ಷಣಗಳಿದ್ದು ಇದರಿಂದ ಮುಂಗಾರು ಆಗಮನ ವೇಗ ಪಡೆದುಕೊಳ್ಳುವ ಸಾಧ್ಯತೆಗಳಿವೆ. ಮೇ 19ರಿಂದ ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ನಿರೀಕ್ಷೆ ಇದೆ.
No comments:
Post a Comment