ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಮಳೆ ಸ್ವಲ್ಪ ಜಾಸ್ತಿ ಇರವ ಮುನ್ಸೂಚನೆ ಇದೆ.
ಈಗಿನಂತೆ ಮೇ 22ರ ತನಕ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾದರೂ 23ರಿಂದ ಮುಂಗಾರು ಉತ್ತಮವಾಗಿ ಆರಂಭವಾಗಲಿದೆ.
ಮಲೆನಾಡು : ಕೊಡಗು, ಹಾಸನ ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮೇ23ರಿಂದ ಮಳೆ ಹೆಚ್ಚಾಗುವ ಲಕ್ಷಣಗಳಿದ್ದು, ಮುಂಗಾರು ಉತ್ತಮವಾಗಿ ಆರಂಭವಾಗಲಿದೆ.
ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಹಾಗೂ ಬಳ್ಳಾರಿಯ ಆಂದ್ರಾ ಗಡಿಭಾಗಗಳಲ್ಲಿ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಜಿಲ್ಲೆಗಳ ಆಂದ್ರಾ ಗಡಿ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ಮೇ 24ರಿಂದ ಮುಂಗಾರು ಮಳೆ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿಯೂ ಆರಂಭವಾಗುವ ಲಕ್ಷಣಗಳಿವೆ.
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಮೇ 23 ಅಥವಾ 24ರಂದು ಗುಜರಾತ್ ಕರಾವಳಿ ಸಮೀಪ ತಲಪುವ ನಿರೀಕ್ಷೆ ಇದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ ಸಾಧ್ಯತೆಯೂ ಇದೆ. ಇದರ ಪರಿಣಾಮದಿಂದ ಮುಂಗಾರು ಚುರುಕಾಗಿದ್ದು, ಈ ವಾಯುಭಾರ ಕುಸಿತವು ಸಂಪೂರ್ಣ ಶಿಥಿಲಗೊಳ್ಳುತ್ತಿದ್ದಂತೆಯೇ ಮುಂಗಾರು ಸ್ವಲ್ಪ ದುರ್ಬಲಗೊಳ್ಳುವ ಸಾಧ್ಯತೆಗಳಿವೆ.
No comments:
Post a Comment