Advertise

29 June 2025

30.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


30.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ದಿನದಲ್ಲಿ 2, 3 ಮಳೆಯ ಮುನ್ಸೂಚೆನೆ ಇದೆ. ( ಗಾಳಿ ಹಾಗೂ ಅಲ್ಲಲ್ಲಿ ಗುಡುಗು ಸಾಧ್ಯತೆಯೂ ಇದೆ). ತೋಟಗಳಿಗೆ ಔಷಧಿ ಸಿಂಪಡಿಸಲು ನಾಳೆಯಿಂದ (ಜೂನ್ 30ರಿಂದ) ಅವಕಾಶ ಸಿಗಬಹುದು. 
ಈಗಿನಂತೆ ಜೂನ್ 30ರಿಂದ ಜುಲೈ 2ರ ತನಕ ಮಳೆಯ ಪ್ರಮಾಣ ಕಡಿಮೆ ಇರುವ ಸಾಧ್ಯತೆಗಳಿದ್ದು, ನಂತರ ಹೆಚ್ಚಾಗುವ ಸೂಚನೆಗಳಿದ್ದರೂ ಮತ್ತೆ 3 ದಿವಸಗಳಲ್ಲಿ ಕಡಿಮೆಯಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲೂ ಮಳೆ ಕಡಿಮೆಯಾಗಿದ್ದು, ದಿನದಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜೂನ್ 30ರಿಂದ ಮಳೆಯ ಪ್ರಮಾಣ ಮತ್ತಷ್ಟು ಕಡಿಮೆಯಾಗುವ ಲಕ್ಷಣಗಳಿವೆ. 

ಒಳನಾಡು : ಉತ್ತರ ಒಳನಾಡಿನ ಧಾರವಾಡ, ಉತ್ತರ ಬೆಳಗಾವಿ, ಕಲಬುರ್ಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಇರಬಹುದು.
ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಮುನ್ಸೂಚೆನೆ ಇದೆ. 
ಈಗಿನಂತೆ ಜುಲೈ 3ರಿಂದ 5ರ ತನಕ ಉತ್ತರ ಹಾಗೂ ದಕ್ಷಿಣ ಒಳನಾಡು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ನಂತರ ಕಡಿಮೆಯಾಗುವ ಲಕ್ಷಣಗಳಿವೆ. 

28 June 2025

29.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

29.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ 2 ಅಥವಾ 3 ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. 
ಈಗಾಗಲೇ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಈಗಿನಂತೆ 29ರಿಂದ ದಿನದಲ್ಲಿ ಒಂದೆರಡು ಮಳೆಯ ಸಾಧ್ಯತೆಗಳಿವೆ. 
ಜುಲೈ 3ರಿಂದ ಹೆಚ್ಚಾದರೆ 6ರ ನಂತರ ಮತ್ತೆ ಕಡಿಮೆಯಾಗುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ 2, 3 ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆ ಮುಂದುವರಿಯಲಿದ್ದು, ಜುಲೈ 3ರಿಂದ ಸ್ವಲ್ಪ ಹೆಚ್ಚಾಗುವ ಸಾಧ್ಯತೆ ಇದ್ದರೂ 6ರ ನಂತರ ಮತ್ತೆ ಕಡಿಮೆಯಾಗುವ ಸೂಚನೆಗಳಿವೆ. 

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. 
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 
ಈಗಿನಂತೆ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. 

ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ. ಇದರಿಂದ ಜುಲೈ ತಿಂಗಳ ಮೊದಲಾರ್ಧದಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತುಂಬಾ ಕಡಿಮೆ ಇರಬಹುದು. 

27 June 2025

28.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

28.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚೆನೆ ಇದೆ. ಆದರೆ ಮಧ್ಯ ಬಿಡುವಿನ ಅಂತರ ಸ್ವಲ್ಪ ಜಾಸ್ತಿ ಇರಬಹುದು. ಮಳೆಯೊಂದಿಗೆ ಗಾಳಿಯ ವೇಗವೂ ಸ್ವಲ್ಪ ಜಾಸ್ತಿ ಇರಬಹುದು.
ಈಗಿನಂತೆ ಜೂನ್ 29 ಹಾಗೂ 30ರಂದು ಮಳೆಯ ಪ್ರಮಾಣ ಕಡಿಮೆಯಿರುವ ಸಾಧ್ಯತೆಗಳಿದ್ದು, ಮಳೆ ಪೂರ್ತಿ ಬಿಟ್ಟು ಸಿಗುವ ಸಾಧ್ಯತೆಗಳಿಲ್ಲ. ಜುಲೈ 1ರಿಂದ ಸ್ವಲ್ಪ ಹೆಚ್ಚಾಗಬಹುದು. ಜುಲೈ 6ರಿಂದ ಮತ್ತೆ ಕಡಿಮೆಯಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚೆನೆ ಇದೆ. ಬಿಡುವಿನ ಸಮಯ ಸ್ವಲ್ಪ ಹೆಚ್ಚಿರಬಹುದು. ಕೆಲವು ಭಾಗಗಳಲ್ಲಿ ಸ್ವಲ್ಪ ಬಿಸಿಲಿನ ಸಾಧ್ಯತೆಯೂ ಇದೆ. 
ಈಗಿನಂತೆ ಜೂನ್ 29ರಿಂದ ಕಡಿಮೆಯಾಗುವ ಲಕ್ಷಣಗಳಿವೆ. ಕರಾವಳಿಯಲ್ಲಿ ಮಳೆಯ ಹೆಚ್ಚಿದಂತೆಯೇ ಮಲೆನಾಡು ಭಾಗಗಳಲ್ಲಿಯೂ ಹೆಚ್ಚಾಗುವ ಸಾಧ್ಯತೆ ಇದೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮೋಡ ಹಾಗೂ ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 
ಈಗಿನಂತೆ ಜೂನ್ 28ರಿಂದ ರಾಜ್ಯದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಜುಲೈ 4ರಿಂದ ಅಲ್ಲಲ್ಲಿ ಮತ್ತೆ ಮಳೆ ಆರಂಭವಾಗುವ ಸೂಚನೆಗಳಿವೆ.


25 June 2025

26. 06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚೆನೆ ಇದೆ. ಮಳೆ ಬಿಡುವಿನ ಅವಧಿ ಹೆಚ್ಚಿದಂತೆ ಗಾಳಿಯ ವೇಗವೂ ಹೆಚ್ಚಿರಬಹುದು. 
ಉತ್ತರ ಕನ್ನಡ ಕರಾವಳಿ ತೀರ ಭಾಗಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಜೂನ್ 28ರ ತನಕ ಉತ್ತಮ ಮಳೆ ಮುಂದುವರಿಯುವ ಲಕ್ಷಣಗಳಿವೆ. 29ರಿಂದ ಕಡಿಮೆಯಾದರೂ ಜುಲೈ 4ರಿಂದ ಮತ್ತೆ ಹೆಚ್ಚಳವಾಗುವ ಸೂಚನೆಗಳಿವೆ. 

ಮಲೆನಾಡು : ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರಬಹುದು. 
ಈಗಿನಂತೆ ಜೂನ್ 29ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದರೂ ಜುಲೈ 4ರಿಂದ ಉತ್ತಮ ಮುಂಗಾರು ಮಳೆಯ ಸಾಧ್ಯತೆಗಳಿವೆ. 

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಉತ್ತಮ ಹಾಗೂ ಬಾಗಲಕೋಟೆ, ಗದಗ, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಚಿತ್ರದುರ್ಗ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಜೂನ್ 28ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಕಡಿಮೆಯಾದರೂ ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. ಜುಲೈ 4ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆಯಾಗುವ ನಿರೀಕ್ಷೆಗಳಿವೆ. 

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ, ಒಡಿಶಾ ಕರಾವಳಿಗೆ ತಲುಪಿರುವ ತಿರುವಿಕೆಯು ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. 

24 June 2025

25.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ



25.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚೆನೆ ಇದೆ. ಕೆಲವು ಭಾಗಗಳಲ್ಲಿ ಗಾಳಿ ಹಾಗೂ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. 
ಈಗಿನಂತೆ ಜೂನ್ 29ರಿಂದ ಸ್ವಲ್ಪ ಮಟ್ಟಿಗೆ ಮಳೆ ಕಡಿಮೆ ಆಗುವ ಲಕ್ಷಣಗಳಿವೆ. (ನಿನ್ನೆಯ ತನಕ ಜೂನ್ 29ರಿಂದ ಪೂರ್ತಿ ಕಡಿಮೆಯಾಗುವ ಮುನ್ಸೂಚನೆ ಇತ್ತು. ಈಗ ಬದಲಾಗಿದೆ) 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚೆನೆ ಇದೆ. 
ಈಗಿನಂತೆ ಜೂನ್ 28ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 
ಈಗಿನಂತೆ ಜೂನ್ 27ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು, ಜೂನ್ 29ರಿಂದ ಅಲ್ಪ ಪ್ರಮಾಣದಲ್ಲಿ ದುರ್ಬಲಗೊಳ್ಳುವ ಲಕ್ಷಣಗಳಿವೆ. 

23 June 2025

24.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಮಧ್ಯಾಹ್ನ ನಂತರ ಮಳೆ ಸ್ವಲ್ಪ ಹೆಚ್ಚಾಗುವ ಸಾಧ್ಯತೆಗಳಿವೆ. 
ಈಗಿನಂತೆ ಜೂನ್ 28ರ ತನಕ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, 29ರಿಂದ ಬೆಳೆಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರಬಹುದು. 
ಈಗಿನಂತೆ ಜೂನ್ 29ರಿಂದ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿದ್ದು ತೋಟಗಳಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು. 

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು ಜಿಲ್ಲೆಯ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ಜೂನ್ 25ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಕರಾವಳಿ ಜೆಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳನ್ನು ಹೊರತುಪಡಿಸಿ ಉಳಿದ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

ಜೂನ್ ಕೊನೆಯಲ್ಲಿ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆಗಳಿವೆ. 

22 June 2025

23.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚೆನೆ ಇದೆ. ಕಾಸರಗೋಡು ಜಿಲ್ಲೆಯಲ್ಲಿ ಮತ್ತು ದಕ್ಷಿಣ ಕನ್ನಡದ ಸುಳ್ಯ ತಾಲ್ಲೂಕು ಸ್ವಲ್ಪ ಕಡಿಮೆ ಇದ್ದರೂ, ಮಧ್ಯಾಹ್ನ ನಂತರ ಹೆಚ್ಚಾಗುವ ಸಾಧ್ಯತೆ ಇದೆ.
ಈಗಿನಂತೆ ಜೂನ್ 23ರಿಂದ ಸ್ವಲ್ಪ ಕಡಿಮೆ ಇದ್ದರೂ ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗುವ ಸಾಧ್ಯತೆ ಕಡಿಮೆ ಇರಬಹುದು. ಜೂನ್ 29ರಿಂದ ಅವಕಾಶ ಸಿಗಬಹುದು. 

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರಬಹುದು.
ಈಗಿನಂತೆ ಜೂನ್ 28ರ ತನಕ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. 

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ದಕ್ಷಿಣ ಒಳನಾಡಿನ ರಾಮನಗರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ತುಮಕೂರು ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ಜೂನ್ 26ರಿಂದ 28ರ ತನಕ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

14.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

14.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ಕರ್...