Advertise

07 June 2025

08.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


08.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಅಲ್ಪ ಅವಧಿಯ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜೂನ್ 8ರಂದು ಅಲ್ಲಲ್ಲಿ ತುಂತುರು ಹಾಗೂ 9ರಿಂದ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಜೂನ್ 11ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ ಆರಂಭವಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದ್ದು, ಹಾಸನ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಗಳಿವೆ. ಚಿಕ್ಕಮಗಳೂರು ಜಿಲ್ಲೆಯ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜೂನ್ 10ರ ತನಕ ಮಲೆನಾಡು ಭಾಗಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿದ್ದು, 11ರಿಂದ ಉತ್ತಮ ಮಳೆಯ ಮುನ್ಸೂಚೆನೆ ಇದೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ರಾಯಚೂರು, ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು,
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 
ಈಗಿನಂತೆ ಜೂನ್ 8ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಜೂನ್ 11ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಹೆಚ್ಚಾಗುವ ನಿರೀಕ್ಷೆ ಇದೆ. 

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11ರಿಂದ ಮುಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗುವ ಲಕ್ಷಣಗಳಿವೆ. 

No comments:

Post a Comment

18.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಉತ್ತಮ ಮಳೆ, ದ...