Advertise

10 June 2025

11.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

11.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕರಾವಳಿ ತೀರ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಜೂನ್ 11ರಂದು ಸಹ ಕರಾವಳಿ ತೀರ ಭಾಗಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಸೂಚನೆಗಳಿವೆ. ಜೂನ್ 11ರಿಂದ ಕರಾವಳಿ ಜಿಲ್ಲೆಗಳಾದ್ಯಂತ ಭಾರಿ ಮಳೆಯ ಮುನ್ಸೂಚೆನೆ ಇದೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲೂ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೂ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ನಾಳೆಯೂ ಮಲೆನಾಡು ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಜೂನ್ 12ರಿಂದ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚೆನೆ ಇದೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ತುಂತುರು ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಬೆಂಗಳೂರು ಉತ್ತರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ) ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜೂನ್ 11ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಹೆಚ್ಚಾಗುವ ಲಕ್ಷಣಗಳಿವೆ. 
ಜೂನ್ 12ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚೆನೆ ಇದೆ. 
ಬಂಗಾಳಕೂಲ್ಲಿಯ ಮೇಲ್ಮೈ ಸುಳಿಗಾಳಿಯು ಜೂನ್ 11ರ ರಾತ್ರಿ ಅಥವಾ 12ರಂದು ಆಂದ್ರಾ ಕರಾವಳಿಗೆ ಪ್ರವೇಶಿಸುವ ಸಾಧ್ಯತೆಗಳಿವೆ. ಇದರ ಪರಿಣಾಮದಿಂದ ಮುಂಗಾರು ಚುರುಕಾಗಿದ್ದು, ರಾಜ್ಯದಲ್ಲಿ ಭಾರಿ ಮಳೆಯ ಮುನ್ಸೂಚೆನೆ ಇದೆ. 

No comments:

Post a Comment

18.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಉತ್ತಮ ಮಳೆ, ದ...