20.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ, ದಿನದಲ್ಲಿ ಅಲ್ಲಲ್ಲಿ 2 ರಿಂದ 3 ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ ತಾಲೂಕು ಮಳೆ ಮತ್ತೂ ಕಡಿಮೆ ಇರಬಹುದು. (ಕೆಲವು ಭಾಗಗಳಲ್ಲಿ ಅನಿರೀಕ್ಷಿತ ಗುಡುಗು ಸಾಧ್ಯತಯೂ ಇದೆ.)
ಈಗಿನಂತೆ ಜೂನ್ 21ರ ತನಕ ಮಳೆಯ ಪ್ರಮಾಣ ಕಡಿಮೆ ಇದ್ದು, ನಂತರ ಸ್ವಲ್ಪ ಜಾಸ್ತಿಯಾಗುವ ಲಕ್ಷಣಗಳಿವೆ. ಆದರೂ ಭಾರಿ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಸಾಮಾನ್ಯ ಮಳೆ ಮುಂದುವರಿಯಬಹುದು.
ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಮೋಡ ಹಾಗೂ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ದಿನದಲ್ಲಿ 2, 3 ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಮೋಡ ಹಾಗೂ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ದಿನದಲ್ಲಿ 2, 3 ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜೂನ್ 22ರಿಂದ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಲಕ್ಷಣಗಳಿದ್ದರೂ ಭಾರಿ ಮಳೆಯ ಸಾಧ್ಯತೆಗಳು ಗೋಚರಿಸುತ್ತಿಲ್ಲ.
ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಈಗಿನಂತೆ ಜೂನ್ 26ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಆರಂಭವಾಗುವ ಲಕ್ಷಣಗಳಿವೆ.
ಅರಬ್ಬಿ ಸಮುದ್ರದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತದಂತಹ ತಿರುವಿಕೆಯು ಮಧ್ಯಪ್ರದೇಶದ ಉತ್ತರ ಭಾಗ ತಲುಪಿದ್ದು, ಅಲ್ಲೆ ಶಿಥಿಲಗೊಳ್ಳುವ ಲಕ್ಷಣಗಳಿವೆ.
ಬಂಗಾಳಕೊಲ್ಲಿಯ ತಿರುಗುವಿಕೆಯು ಪಶ್ಚಿಮ ಬಂಗಾಳದಲ್ಲಿದ್ದು, ಜೂನ್ 21ರಂದು ಉತ್ತರ ಪ್ರದೇಶ ತನಕ ಸಾಗಿ ಶಿಥಿಲಗೊಳ್ಳುವ ಸಾಧ್ಯತೆಗಳಿವೆ.
ಇದರ ಪರಿಣಾಮದಿಂದ ಇವತ್ತು ರಾಜ್ಯದ ಕರಾವಳಿ ಭಾಗಗಳಿಲ್ಲಿ ಮಳೆಯ ಪ್ರಮಾಣ ನಿರೀಕ್ಷೆಗಿಂತ ಸ್ವಲ್ಪ ಜಾಸ್ತಿ ಇರಬಹುದು.
No comments:
Post a Comment