Advertise

23 June 2025

24.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಮಧ್ಯಾಹ್ನ ನಂತರ ಮಳೆ ಸ್ವಲ್ಪ ಹೆಚ್ಚಾಗುವ ಸಾಧ್ಯತೆಗಳಿವೆ. 
ಈಗಿನಂತೆ ಜೂನ್ 28ರ ತನಕ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, 29ರಿಂದ ಬೆಳೆಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರಬಹುದು. 
ಈಗಿನಂತೆ ಜೂನ್ 29ರಿಂದ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿದ್ದು ತೋಟಗಳಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು. 

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು ಜಿಲ್ಲೆಯ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ಜೂನ್ 25ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಕರಾವಳಿ ಜೆಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳನ್ನು ಹೊರತುಪಡಿಸಿ ಉಳಿದ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

ಜೂನ್ ಕೊನೆಯಲ್ಲಿ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆಗಳಿವೆ. 

No comments:

Post a Comment

14.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

14.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ಕರ್...