ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚೆನೆ ಇದೆ. ಸುಳ್ಯ, ಕಡಬ ತಾಲೂಕುಗಳಲ್ಲಿ ಸ್ವಲ್ಪ ಕಡಿಮೆ ಇರಬಹುದು.
ಈಗಿನಂತೆ ಜುಲೈ 15ರಂದು ಒಂದು ದಿನ ಮಳೆ ಕಡಿಮೆ ಇದ್ದರೂ 16ರಿಂದ ಉಡುಪಿ, ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜುಲೈ 22ರ ತನಕವೂ ಬಿಟ್ಟು ಬಿಟ್ಟು ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜುಲೈ 14ರಿಂದ ಮಳೆಯ ಪ್ರಮಾಣ ಕಡಿಮೆಯಾದರೂ, ಜುಲೈ 16ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ನಮ್ಮ ಕರಾವಳಿಯಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಗಳಿವೆ. ರಾಜಸ್ಥಾನ, ಉತ್ತರ ಪ್ರದೇಶ ಹಾಗೂ ಮಧ್ಯಪ್ರದೇಶ ಗಡಿ ಭಾಗಗಳಲ್ಲಿ ಇನ್ನೊಂದು ತಿರುಗುವಿಕೆ ಉಂಟಾಗಿದೆ. ಇದರಿಂದ ಮುಂಗಾರು ಮಳೆ ಉತ್ತರ ಭಾರತದ ಕಡೆ ಹೆಚ್ಚಾಗುವ ನಿರೀಕ್ಷೆ ಇದೆ.