Advertise

31 July 2025

01.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


01.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂಗಾರು ದುರ್ಬಲಗೊಂಡಿದ್ದರೂ ಆಗಸ್ಟ್ 3ರ ತನಕ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ನಂತರ ಮೋಡ ಹಾಗೂ ಬಿಸಿಲಿನ ವಾತಾವರಣದ ಸಾಧ್ಯತೆಗಳಿದ್ದರೂ, ಸುಮಾರು ಆಗಸ್ಟ್ 7ರ ಸಮಯದಲ್ಲಿ ತಮಿಳುನಾಡು ಕರಾವಳಿ ಸಮೀಪ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ. ಇದರ ಮೇಲೆ ಅವಲಂಬಿಸಿದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ಆಗಸ್ಟ್ 4ರ ನಂತರ ಅಲ್ಲಲ್ಲಿ ಗುಡುಗು ಮಳೆಯ ಸಾಧ್ಯತೆಗಳನ್ನು ತೋರಿಸುತ್ತಿದೆ.

ಒಳನಾಡು : ಉತ್ತರ ಒಳನಾಡಿನ ವಿಜಯನಗರ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು(ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಆಗಸ್ಟ್ 4ರಿಂದ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.

ಆಗಸ್ಟ್ 2ನೇ ವಾರದಲ್ಲಿ ತಮಿಳುನಾಡು ಕರಾವಳಿಯ ಸಮೀಪ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಸಾಧ್ಯತೆಗಳಿರುವುದರಿಂದ ಆಗಸ್ಟ್ 4ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ತಮಿಳುನಾಡು ಮೂಲಕ ಹಾದು ಬರುವ ಮೋಡಗಳಿಂದ ಗುಡುಗು ಸಹಿತ ಉತ್ತಮ ಮಳೆಯ ಸಾಧ್ಯತೆಗಳನ್ನು ತೋರಿಸುತ್ತಿದೆ ಹಾಗೂ ಮತ್ತಿನ 2 ದಿನಗಳಲ್ಲಿ ಉತ್ತರ ಒಳನಾಡು ಭಾಗಗಳಿಗೂ ವ್ಯಾಪಿಸುವ ಸೂಚನೆಗಳಿವೆ

No comments:

Post a Comment

30.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

30.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕ ರಾಜ್...