ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜುಲೈ 5ರ ತನಕ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. 6ರಿಂದ ಸ್ವಲ್ಪ ಕಡಿಮೆಯಾದರೂ ಜುಲೈ 10ರಿಂದ ಮತ್ತೆ ಹೆಚ್ಚಾಗುವ ನಿರೀಕ್ಷೆ ಇದೆ. (ಮಳೆ ಸಂಪೂರ್ಣ ಬಿಟ್ಟು ಸಿಗುವ ಸಾಧ್ಯತೆ ಕಡಿಮೆಯಾಗುತ್ತಿದೆ. ಮಧ್ಯ ಬಿಡುವಿನ ವೇಳೆಯಲ್ಲಿ ಔಷಧಿ ಸಿಂಪರಣೆ ಮಾಡಬೇಕಾಗಬಹುದು. )
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಬಿಸಿಲು, ಮೋಡ ಹಾಗೂ ಆಗಾಗ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜುಲೈ 6ರಿಂದ ಕಡಿಮೆಯಾದರೂ 10ರಿಂದ ಮತ್ತೆ ಜೋರಾಗುವ ಸಾಧ್ಯತೆಗಳಿವೆ.
ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ದಾವಣಗೆರೆ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಒಂದೆರಡು ಕಡೆ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹೆಚ್ಚಿನ ಭಾಗಗಳಲ್ಲಿ ತುಂತುರು ಮಾತ್ರ ಇರಬಹುದು.
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಜೊತೆಗೆ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. ಜೊತೆಗೆ ಒಂದೆರಡು ಕಡೆ ಸಾಮಾನ್ಯ ಮಳೆಯೂ ಇರಬಹುದು.
ರಾಜ್ಯದಲ್ಲಿ ಜುಲೈ ತಿಂಗಳಲ್ಲಿ ಮುಂಗಾರು ವಾಡಿಕೆಗಿಂತ ಕಡಿಮೆ ಇರುವ ಸಾಧ್ಯತೆಗಳಿವೆ. ಕರಾವಳಿ ಜಿಲ್ಲೆಗಳಲ್ಲಿ ಸರಾಸರಿ ಕಳೆದ 2023 ಹಾಗೂ 2024 ನೇ ಸಾಲಿನಲ್ಲಿ ಜುಲೈ 1700 mm ಗಿಂತಲೂ ಅಧಿಕ ಮಳೆಯಾಗಿತ್ತು. 2025ರ ಲ್ಲಿ ಸ್ವಲ್ಪ ಕಡಿಮೆ ಇರಬಹುದು.
No comments:
Post a Comment