Advertise

06 July 2025

07.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

07.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ಅಲ್ಲಲ್ಲಿ ಗಾಳಿಯ ಸಹಿತ ದಿನದಲ್ಲಿ ಒಂದೆರಡು ಮಳೆಯ ಮುನ್ಸೂಚೆನೆ ಇದೆ. ಮಧ್ಯಾಹ್ನ ನಂತರ ಸ್ವಲ್ಪ ಜಾಸ್ತಿ ಇರಬಹುದು. ದಕ್ಷಿಣ ಕನ್ನಡದ ಮಂಗಳೂರು, ಬಂಟ್ವಾಳ, ಪುತ್ತೂರು, ಬೆಳ್ತಂಗಡಿ ಸ್ವಲ್ಪ ಜಾಸ್ತಿ ಇರಬಹುದು. 
ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಸಂಪೂರ್ಣವಾಗಿ ನಿಲ್ಲುವ ಸಾಧ್ಯತೆ ಕಾಣಿಸುತ್ತಿಲ್ಲ. ಇದೇ ರೀತಿಯ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಮಳೆ ಹೆಚ್ಚಿರಬಹುದು. 
ಈಗಿನಂತೆ ಮುಂದಿನ 10 ದಿನಗಳವರೆಗೂ ಇದೇ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆಗಳಿವೆ. 

ಒಳನಾಡು :  ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ ಜಿಲ್ಲೆಗಳ ಒಂದೆರಡು ತುಂತುರು ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. 
ಈಗಿನಂತೆ ಮುಂದಿನ 10 ದಿನಗಳವರೆಗೂ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಹೊರತು ಜೋರು ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. 


No comments:

Post a Comment

26.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ರಾಜ್ಯದಾದ್ಯಂತ...