Advertise

07 July 2025

08.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


08.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ :  ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚೆನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚೆನೆ ಇದೆ. ಔಷಧಿ ಸಿಂಪಡಿಸಲು ಅವಕಾಶ ಸಿಗುವುದು ಕಡಿಮೆಯಾಗುತ್ತಿದೆ.

ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಸ್ವಲ್ಪ ಮಳೆ ಕಡಿಮೆ ಇರುವ ಮುನ್ಸೂಚೆನೆ ಇದೆ (ನಿನ್ನೆ ಅನಿರೀಕ್ಷಿತವಾಗಿ ಉತ್ತಮ ಮಳೆಯಾಗಿತ್ತು)
ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಮುನ್ಸೂಚನೆಯಂತೆ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಇದ್ದರೂ, ಕರಾವಳಿಯಲ್ಲಿ ಬೀಸುತ್ತಿರುವ ಗಾಳಿಯ ಪ್ರಭಾವದಿಂದ ಅಲ್ಲಲ್ಲಿ ಉತ್ತಮ ಮಳೆ ಮುಂದುವರಿಯುವ ಲಕ್ಷಣಗಳಿವೆ. ( ಕರಾವಳಿಯಲ್ಲಿ ಗಾಳಿಯ ವೇಗ ಕಡಿಮೆಯಾದರೆ ಮಾತ್ರ ಮಲೆನಾಡು ಭಾಗಗಳಲ್ಲಿ ಮಳೆ ಕಡಿಮೆಯಾಗಬಹುದು)

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು, ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಮಳೆಯ ಸಾಧ್ಯತೆಗಳು ಗೋಚರಿಸುತ್ತಿಲ್ಲ. 
ಈಗಿನಂತೆ ಜುಲೈ 12ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗಿದ್ದು, ಇಂದು ರಾತ್ರಿ  ಮಧ್ಯಪ್ರದೇಶ ತಲುಪುವ ನಿರೀಕ್ಷೆ ಇದೆ. ಇದರ ಪ್ರಭಾವದಿಂದ ಕರಾವಳಿ ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ. 

No comments:

Post a Comment

14.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

14.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ಕರ್...