ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು, ದಕ್ಷಿಣ ಕನ್ನಡ ಬಿಡುವಿನ ಅವಧಿ ಸ್ವಲ್ಪ ಜಾಸ್ತಿ ಇರಬಹುದು.
ಈಗಿನಂತೆ ಜುಲೈ 16ರ ತನಕವೂ ಇದೇ ರೀತಿಯ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. IMD ನಕ್ಷೆಯಂತೆ ಜುಲೈ 17ರಿಂದ ಸಣ್ಣ ಪ್ರಮಾಣದ ಮಳೆ ಇರಲಿದ್ದು, ಬಿಸಿಲು ಹಾಗೂ ಮೋಡದ ವಾತಾವರಣದ ಅವಧಿ ಹೆಚ್ಚಿರಿವಂತೆ ತೋರುತ್ತಿದೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗದ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ಈಗಿನಂತೆ ಜುಲೈ 16ರ ತನಕವೂ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. ನಂತರ ಮೋಡ ಹಾಗೂ ಬಿಸಿಲಿನ ವಾತಾವರಣದ ಸಾಧ್ಯತೆಗಳಿವೆ.
ಒಳನಾಡು : ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯ ಕರಾವಳಿ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಧಾರವಾಡ, ಹಾವೇರಿ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಜುಲೈ 16ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ದಕ್ಷಿಣ ಧ್ರುವದ ಬಳಿ ಇದ್ದ ತಿರುವಿಕೆಯು ಕ್ಷೀಣಿಸಿದ್ದು, ಸೋಮಾಲಿಯನ್ ಜಟ್ ವೇವ್ಸ್ ನಂತಹ ಗಾಳಿಯ ಚಲನೆಯ ಪ್ರಭಾವವೂ ಕಡಿಮೆಯಾಗಿದ್ದು, ನೈಜ ಮುಂಗಾರು ಮಳೆಯ ಪುನರಾರಂಭಗೊಂಡಿದೆ. ಈಗಿನಂತೆ ಜುಲೈ 16ರಿಂದ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ.
No comments:
Post a Comment