ಕರಾವಳಿ : ಕಾಸರಗೋಡು ಉತ್ತಮ ಮಳೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಕರಾವಳಿ ತೀರ ತಾಲೂಕುಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜುಲೈ 18ರಿಂದ 21ರ ತನಕ ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಉತ್ತಮ ಹಾಗೂ ಉತ್ತರ ಕನ್ನಡ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, 22ರಿಂದ 27ರ ತನಕವೂ ಸಾಮಾನ್ಯ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ.
ಮಲೆನಾಡು : ಕೊಡಗು ಭಾರಿ ಮಳೆಯ ಮುನ್ಸೂಚೆನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜುಲೈ 21ರ ತನಕ ಕೊಡಗು ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಜುಲೈ 19ರಿಂದ 21ರ ತನಕ ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ನಂತರ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಒಳನಾಡು : ಬೆಳಗಾವಿ ಧಾರವಾಡ, ಹಾವೇರಿ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಗದಗ, ಬಾಗಲಕೋಟೆ, ದಾವಣಗೆರೆ, ಬಳ್ಳಾರಿ, ರಾಯಚೂರು, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಗುಡುಗು ಸಹ ಇರಬಹುದು.
ದಕ್ಷಿಣ ಒಳನಾಡಿನ ಮೈಸೂರು ಚಾಮರಾಜನಗರ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದ್ದರೆ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಗುಡುಗು ಸಹ ಇರಬಹುದು.
ಈಗಿನಂತೆ ಜುಲೈ 25ರ ತನಕವೂ ರಾಜ್ಯದಾದ್ಯಂತ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.
No comments:
Post a Comment