ಕರಾವಳಿ : ಕಾಸರಗೋಡು ಉತ್ತಮ ಮಳೆಯ ಮುನ್ಸೂಚೆನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗಗಳಲ್ಲಿ ಸಾಮಾನ್ಯ ಹಾಗೂ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ.
ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಾಮಾನ್ಯ ಹಾಗೂ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ಈಗಿನಂತೆ
ಈಗಿನಂತೆ ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆ ಜುಲೈ 20ರ ತನಕ ಮುಂದುವರಿಯಲಿದ್ದು, ನಂತರ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಜುಲೈ 19ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.
ಒಳನಾಡು : ಕಲಬುರ್ಗಿ, ಬೀದರ್, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ಬಳ್ಳಾರಿ, ಕೊಪ್ಪಳ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಗುಡುಗು ಸಾಧ್ಯತೆಯೂ ಇದೆ.
ಈಗಿನಂತೆ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಜುಲೈ 26ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಎಂದಿನಂತೆ ಮುಂಗಾರು ಮಳೆಯಾಗುತ್ತಿದ್ದರೆ, ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಧ್ಯಮ ಸ್ತರದ ಗಾಳಿ ಹಾಗೂ ಮೋಡಗಳು ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಕಾರಣದಿಂದ ಮಳೆಯಾಗುತ್ತಿದೆ.
ಮುಂಗಾರು ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಾತ್ರ ಚುರಾಗಿರುವಂತಿದೆ.
No comments:
Post a Comment