ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ನಿರಂತರ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಮಳೆ ಜಾಸ್ತಿಯೇ ಇರಬಹುದು.
ಈಗಿನಂತೆ ಜುಲೈ 21ರ ತನಕ ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ನಂತರ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾದರೂ ಮುಂದಿನ 10 ದಿನಗಳವರೆಗೂ ಮಳೆ ಮುಂದುವರಿಯುವ ಲಕ್ಷಣಗಳಿವೆ. ತೋಟಗಳಿಗೆ ಔಷಧಿ ಸಿಂಪಡಿಸಲು ಜುಲೈ ಕೊನೆಯ ತನಕವೂ ಅವಕಾಶ ಸಿಗುವುದು ಕಡಿಮೆ ಇರಬಹುದು.
ಈಗಿನಂತೆ ಜುಲೈ 21ರ ತನಕ ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ನಂತರ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾದರೂ ಮುಂದಿನ 10 ದಿನಗಳವರೆಗೂ ಮಳೆ ಮುಂದುವರಿಯುವ ಲಕ್ಷಣಗಳಿವೆ. ತೋಟಗಳಿಗೆ ಔಷಧಿ ಸಿಂಪಡಿಸಲು ಜುಲೈ ಕೊನೆಯ ತನಕವೂ ಅವಕಾಶ ಸಿಗುವುದು ಕಡಿಮೆ ಇರಬಹುದು.
ಮಲೆನಾಡು : ಕೊಡಗು(ಭಾರಿ ಮಳೆಯ ಮುನ್ಸೂಚೆನೆ ಇದೆ), ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಶಿವಮೊಗ್ಗ ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜುಲೈ 21ರ ತನಕ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ನಂತರ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಆದರೂ ಜುಲೈ ಕೊನೆಯ ತನಕವೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುಂದುವರಿಯುವ ಸಾಧ್ಯತೆಗಳಿವೆ.
ಒಳನಾಡು : ಉತ್ತರ ಒಳನಾಡಿನ ಬೆಳಗಾವಿಯ ಒಂದೆರಡು ಕಡೆ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆಯ ಒಂದೆರಡು ಕಡೆ, ದಾವಣಗೆರೆ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಜುಲೈ 26ರ ತನಕವೂ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಮಧ್ಯಮ ಸ್ತರದ ಗಾಳಿ ಹಾಗೂ ಮೋಡಗಳು ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಕಾರಣದಿಂದ ಒಳನಾಡು ಭಾಗಗಳಲ್ಲಿ ಮಳೆಯಾಗುತ್ತಿದ್ದು, ಈ ಗಾಳಿಯು ಮಲೆನಾಡು ಭಾಗಗಳಲ್ಲಿ ಮುಂಗಾರು ಮಾರುತದ ಪ್ರಭಾವಕ್ಕೊಳಗಾಗಿ ಕೊಡಗು, ಕೇರಳ, ತಮಿಳುನಾಡು ಮೂಲಕ ಬಂಗಾಳಕೊಲ್ಲಿಗೆ ಪ್ರವೇಶಿಸುತ್ತಿವೆ. ಈ ಕಾರಣದಿಂದ ಕೊಡಗು ಹಾಗೂ ಕೇರಳದಲ್ಲಿ ಭಾರಿ ಮಳೆಯ ಮುನ್ಸೂಚೆನೆ ಇದೆ.
No comments:
Post a Comment