Advertise

25 July 2025

26.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಅಲ್ಲಲ್ಲಿ ಅಲ್ಪ ಪ್ರಮಾಣದ ಬಿಸಿಲು ಸಾಧ್ಯತೆಯೂ ಇದೆ. ಉಡುಪಿ ಜಿಲ್ಲೆಯ ಉತ್ತರ ಭಾಗದ ತಾಲೂಕು ಹಾಗೂ ಉತ್ತರ ಕನ್ನಡ ಜಿಲ್ಲೆಯ ದಕ್ಷಿಣ ಭಾಗದಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. ಕರಾವಳಿಯಾದ್ಯಂತ ಮಳೆಯ ಜೊತೆಗೆ ಗಾಳಿಯೂ ಇರಬಹುದು. ಇದರಿಂದ ಮಳೆ ಒಮ್ಮೆಗೇ ಜೋರು ಬಂದು 5 - 10 ನಿಮಿಷಗಳಲ್ಲಿ ಕಡಿಮೆಯಾಗಬಹುದು.
ಈಗಿನಂತೆ ಜುಲೈ 28ರ ತನಕ ಬಿಟ್ಟು ಬಿಟ್ಟು ಸಾಮಾನ್ಯ ಮಳೆ(ಗಾಳಿಯೊಂದಿಗೆ) ಮುಂದುವರಿಯುವ ಸಾಧ್ಯತೆಗಳಿವೆ. 

ಮಲೆನಾಡು :    ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಗಾಳಿಯೊಂದಿಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. (ಮಧ್ಯಾಹ್ನ ನಂತರ ಕಡಿಮೆ ಆಗಬಹುದು) ಉಳಿದ ಭಾಗಗಳಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ 27ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. 29 ಅಥವಾ 30ರಿಂದ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ.

ಒಳನಾಡು : ಉತ್ತರ ಒಳನಾಡಿನ ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. 
ಬೆಳಗಾವಿಯ ಬಹುತೇಕ ಭಾಗಗಳಲ್ಲಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬಳ್ಳಾರಿ ಹಾಗೂ ಕೊಪ್ಪಳ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರಿನ ಕೊಡಗಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ,  ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಜುಲೈ 28ರ ತನಕ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, 29 ಅಥವಾ 30ರಿಂದ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಸೂಚನೆಗಳಿವೆ 

ಬಾಂಗ್ಲಾದೇಶ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಬಾಂಗ್ಲಾದೇಶ ಕರಾವಳಿಯಲ್ಲಿ ಪ್ರವೇಶಿಸಿದ್ದು ಇನ್ನು ಒಂದೆರಡು ದಿನಗಳಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. 
ಇದರೊಂದಿಗೆ ಮುಂಗಾರು ಸ್ವಲ್ಪ ಮಟ್ಟಿಗೆ ದುರ್ಬಲಗೊಳ್ಳುವ ಸಾಧ್ಯತೆಗಳಿವೆ. 

No comments:

Post a Comment

27.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

27.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :  ಕರಾವಳಿ : ಕಾಸರಗೋಡು ಸೇರಿದಂತೆ ಕರ...