ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಗಾಳಿಯೊಂದಿಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸಹ ಸ್ವಲ್ಪ ಜಾಸ್ತಿ ಇರಬಹುದು.
ಈಗಿನಂತೆ ಜುಲೈ 31ರ ತನಕವೂ ಸಾಮಾನ್ಯ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ.
ಮಲೆನಾಡು : ಕೊಡಗು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಗಾಳಿಯೊಂದಿಗೆ ಉತ್ತಮ ಹಾಗೂ ಉಳಿದ ಭಾಗಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಗಾಳಿ ಮಳೆಯ ವಾತಾವರಣವು ಜುಲೈ 28ರ ತನಕ ಮುಂದುವರಿಯುವ ಮುನ್ಸೂಚೆನೆ ಇದೆ.
ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ, ದಾವಣಗೆರೆ, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಜುಲೈ 27ರಂದು ಮಧ್ಯಪ್ರದೇಶ ದಾಟಿ ರಾಜಸ್ಥಾನ ಗಡಿ ಭಾಗದಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದರ ಪರಿಣಾಮದಿಂದ ರಾಜ್ಯದ ಕರಾವಳಿ ಭಾಗಗಳಲ್ಲಿ ಜುಲೈ 31ರ ತನಕವೂ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.
No comments:
Post a Comment