Advertise

27 July 2025

28.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


28.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚೆನೆ ಇದೆ. ಬಿಡುವಿನ ವೇಳೆ ಸ್ವಲ್ಪ ಜಾಸ್ತಿ ಇರಬಹುದು. 
ಗಾಳಿಯ ರಭಸವೂ ಸ್ವಲ್ಪ ಮಟ್ಟಿಗೆ ಕಡಿಮೆಯಾಗಬಹುದು. 
ಈಗಿನಂತೆ ಆಗಸ್ಟ್ 2ರ ತನಕ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.
ನಂತರ ಮೋಡ ಬಿಸಿಲಿನ ವಾತಾವರಣದ ಸೂಚನೆಗಳಿವೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಗಾಳಿಯ ರಭಸವೂ ಕಡಿಮೆಯಾಗಬಹುದು. 
ಈಗಿನಂತೆ ಜುಲೈ 29ರ ತನಕ ಕರಾವಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಾಮಾನ್ಯ ಹಾಗೂ ಉಳಿದ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ. ನಂತರ ಮೋಡ ಹಾಗೂ ಬಿಸಿಲಿನ ವಾತಾವರಣದ ಸಾಧ್ಯತೆಗಳಿವೆ. 

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 
ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಆಗಸ್ಟ್ 3ರ ತನಕವೂ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. 

ಉತ್ತರ ಭಾರತದ ವಾಯುಭಾರ ಕುಸಿತವು ಮಧ್ಯಪ್ರದೇಶ ತಲುಪಿದ್ದು, ಮುಂದೆ ರಾಜಸ್ಥಾನಕ್ಕೆ ಚಲಿಸುವ ಸಾಧ್ಯತೆಗಳಿವೆ. 

No comments:

Post a Comment

19.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ರಾಜ...