Advertise

29 July 2025

30.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

30.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ :  ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಸುಮಾರು ಮುಂಜಾನೆ 11.30 ಗಂಟೆಯ ನಂತರ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ ಹಾಗೂ ಬಿಡುವಿನ ಸಮಯ ಹೆಚ್ಚಿರಬಹುದು.
ಈಗಿನಂತೆ ಆಗಸ್ಟ್ 1ರ ತನಕ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ನಂತರ ಕಡಿಮೆಯಾಗಲಿದ್ದು, 3ರಿಂದ ಬಿಸಿಲಿನ ವಾತಾವರಣದ ಸಾಧ್ಯತೆಗಳಿವೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ತುಂತುರು ಹಾಗೂ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ತುಂತುರು ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಆಗಸ್ಟ್ 1ರ ತನಕ ಈ ವಾತಾವರಣ ಮುಂದುವರಿಯುವ ಸಾಧ್ಯತೆಗಳಿದ್ದು 3ರ ನಂತರ ಬಿಸಿಲು ಹಾಗೂ ಮೋಡದ ವಾತಾವರಣದ ಸೂಚನೆಗಳಿವೆ. 

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ. 
ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ಆಗಸ್ಟ್ ತಿಂಗಳ ಮೊದಲ ವಾರದಲ್ಲಿ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. 
ನಂತರ ಕಾದು ನೋಡಬೇಕಾಗಿದೆ. 

ಮಧ್ಯಪ್ರದೇಶ ಹಾಗೂ ಉತ್ತರ ಮಹಾರಾಷ್ಟ್ರ ಭಾಗಗಳಲ್ಲಿ ತಿರುವಿಕೆಯ ಕಾರಣದಿಂದ ಈ ರಾಜ್ಯಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದ್ದು, ಮಹಾರಾಷ್ಟ್ರ ಕಡೆಯಿಂದ ಕರ್ನಾಟಕದ ಉತ್ತರ ಒಳನಾಡು ಭಾಗಗಳಿಗೆ ಹರಿದು ಬರುತ್ತಿರುವ ನದಿಗಳಲ್ಲಿ ನೀರು ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ. 


No comments:

Post a Comment

19.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ರಾಜ...