ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಎರಡು ಮೂರು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬಿಸಿಲಿನ ತಾಪ ಹೆಚ್ಚಿರುವುದರಿಂದ ಗಾಳಿಯ ಸಾಧ್ಯತೆಯೂ ಇದೆ. ಕಾಸರಗೋಡು ರಾತ್ರಿ ಮಳೆ ಸ್ವಲ್ಪ ಜಾಸ್ತಿ ಇರಬಹುದು.
ಈಗಿನಂತೆ ಮುಂದಿನ 10 ದಿನಗಳವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ದಿನದಲ್ಲಿ ಒಂದೆರಡು ಮಳೆಯ ಸಾಧ್ಯತೆಗಳಿವೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಮಲೆನಾಡು ಭಾಗಗಳಲ್ಲಿ ಮಳೆ ಕಡಿಮೆಯಾಗಿದ್ದು, ಆಗಸ್ಟ್ 1ರಿಂದ ಮೋಡ ಹಾಗೂ ಬಿಸಿಲಿನ ವಾತಾವರಣದ ಸಾಧ್ಯತೆಗಳಿವೆ. ಆಗಸ್ಟ್ 4ರ ನಂತರ ಮತ್ತೆ ಮಳೆಯ ಮುನ್ಸೂಚೆನೆ ಇದೆ.
ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಈ ವಾತಾವರಣವು ಆಗಸ್ಟ್ 3ರ ವರೆಗೆ ಮುಂದುವರಿಯುವ ಸಾಧ್ಯತೆಗಳಿದ್ದು, 4ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಸಾಧ್ಯತೆಗಳಿವೆ. ಆಗಸ್ಟ್ 7ರ ನಂತರ ಉತ್ತರ ಒಳನಾಡು ಭಾಗಗಳಲ್ಲಿಯೂ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ.
ಉತ್ತರ ಪೆಸಿಫಿಕ್ ಸಾಗರದಲ್ಲಿ ಬದಲಾಗುತ್ತಿರುವ ಹವಾಮಾನ (ಪ್ರಭಲ ಭೂಕಂಪ ಹಾಗೂ ಸುನಾಮಿ) ನಮ್ಮ ಮುಂಗಾರು ಮೇಲೆ ಯಾವ ರೀತಿಯ ಪರಿಣಾಮಗಳು ಬೀರಬಹುದು ಕಾದು ನೋಡಬೇಕಾಗಿದೆ.
No comments:
Post a Comment