Advertise

31 August 2025

01.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

01.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯಲಿದ್ದು, ಸೆಪ್ಟೆಂಬರ್ 2ರಿಂದ ಮಳೆ ಸ್ವಲ್ಪ ಹೆಚ್ಚಾಗುವ ಸಾಧ್ಯತೆಗಳಿವೆ. ಈ ಮಳೆಯು ಸೆಪ್ಟೆಂಬರ್ 6ರ ತನಕ ಇರಲಿದ್ದು, ನಂತರ ಕಡಿಮೆಯಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಈಗಿನಂತೆ ಸೆಪ್ಟೆಂಬರ್ 2ರಿಂದ ಮಳೆ ಸ್ವಲ್ಪ ಹೆಚ್ಚಾಗುವ ಮುನ್ಸೂಚನೆಗಳಿವೆ. 

ಒಳನಾಡು : ಉತ್ತರ ಒಳನಾಡಿನ ಧಾರವಾಡ ಹಾವೇರಿ, ಗದಗ, ವಿಜಯನಗರ, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 4ರ ತನಕ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಉತ್ತರ ಥೈಲಾಂಡ್ ನಲ್ಲಿ ಈಗಾಗಲೇ ವಾಯುಭಾರ ಕುಸಿತ ಉಂಟಾಗಿದ್ದು, ಸೆಪ್ಟೆಂಬರ್ 2ರ ವೇಳೆಗೆ ಒಡಿಸ್ಸಾ ಕರಾವಳಿ ತಲಪುವ ನಿರೀಕ್ಷೆಯಿದೆ. ಇದರ ಪರಿಣಾಮದಿಂದ ರಾಜ್ಯದ ಕರಾವಳಿಯಲ್ಲಿ ಮಳೆ ಹೆಚ್ಚಾಗುವ ಸೂಚನೆಗಳಿವೆ. 

30 August 2025

31.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

31.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ :  ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಮಳೆಯ ಮುನ್ಸೂಚೆನೆ ಇದೆ. ಅಲ್ಲಲ್ಲಿ ಸಣ್ಣ ಅವಧಿಯ ಬಿಸಿಲು ಇರಬಹುದು. 
ಈಗಿನಂತೆ ಬಂಗಾಳಕೊಲ್ಲಿಯ ಒಡಿಸ್ಸಾ ಕರಾವಳಿಯಲ್ಲಿ ಇನ್ನೊಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಇದರ ಪರಿಣಾಮದಿಂದ ಸೆಪ್ಟೆಂಬರ್ 1ರ ತನಕ ಮಳೆಯ ಪ್ರಮಾಣ ಕಡಿಮೆ ಇದ್ದು, 2ರಿಂದ ಮತ್ತೆ ಹೆಚ್ಚಾಗುವ ಸಾಧ್ಯತೆಗಳಿವೆ. ಈ ಮಳೆಯು ಸೆಪ್ಟೆಂಬರ್ 7ರ ತನಕ ಮುಂದುವರಿಯುವ ಸೂಚನೆಗಳಿವೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಸೆಪ್ಟೆಂಬರ್ 1ರ ತನಕ ಮಳೆಯ ಪ್ರಮಾಣ ಕಡಿಮೆ ಇದ್ದು, 2ರಿಂದ ಹೆಚ್ಚಾಗುವ ನಿರೀಕ್ಷೆ ಇದೆ. 

ಒಳನಾಡು : ಉತ್ತರ ಒಳನಾಡಿನ ಬೀದರ್ ಜಿಲ್ಲೆಯ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಾವಣಗೆರೆ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. 
ದಕ್ಷಿಣ ಒಳನಾಡಿನ ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 
ಈಗಿನಂತೆ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಭಾರಿ ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. 

ಸೆಪ್ಟೆಂಬರ್ 2ರಂದು ಬಂಗಾಳಕೊಲ್ಲಿಯ ಒಡಿಸ್ಸಾ ಕರಾವಳಿಯಲ್ಲಿ ಇನ್ನೊಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 6ರಂದು ಮಹಾರಾಷ್ಟ್ರ, ಗುಜರಾತ್ ತಲಪುವ ನಿರೀಕ್ಷೆಯಿದೆ. 

28 August 2025

29.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


29.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ನಿರಂತರ ಮಳೆಯ ಮುನ್ಸೂಚೆನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಸ್ವಲ್ಪ ಹೆಚ್ಚಿರಬಹುದು. ಉತ್ತರ ಕನ್ನಡ ಬಿಟ್ಟು ಬಿಟ್ಟು ಮಳೆಯ ಮುನ್ಸೂಚೆನೆ ಇದೆ. 
ಈಗಿನಂತೆ ಆಗಸ್ಟ್ 29ರ ತನಕ ಇದೇ ವಾತಾವರಣ ಮುಂದುವರಿಯ ಸಾಧ್ಯತೆಗಳಿದ್ದು, 30ರಿಂದ ಮಳೆ ಸ್ವಲ್ಪ ಕಡಿಮೆಯಾದರೂ ಸಮಾನ್ಯ ಮಳೆ ಸೆಪ್ಟೆಂಬರ್ 4ರ ತನಕ ಮುಂದುವರಿಯುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಬಿಡುವಿನ ಅವಧಿ ಕಡಿಮೆ ಇರಬಹುದು.
ಈಗಿನಂತೆ ಆಗಸ್ಟ್ ಈ ಮಳೆಯು 29ರ ತನಕ ಇರುವ ಸಾಧ್ಯತೆಗಳಿದ್ದು, 30ರಿಂದ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದ್ದು, ವಿಜಯಪುರ, ರಾಯಚೂರು, ಕಲಬುರ್ಗಿ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ. ಒಂದೆರಡು ಕಡೆ ಸಾಮಾನ್ಯ ಮಳೆ ಇರಬಹುದು. 
ಈಗಿನಂತೆ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಆಗಸ್ಟ್ 29ರಿಂದ ಮಳೆ ಕಡಿಮೆಯಾಗುವ ಸೂಚನೆಗಳಿದ್ದು, ಆಗಸ್ಟ್ 31ರ ನಂತರ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಒಡಿಸ್ಸಾ ದಿಂದ, ಮಧ್ಯಪ್ರದೇಶ, ಮಹಾರಾಷ್ಟ್ರ ತನಕ ವ್ಯಾಪಿಸಿದ್ದು, ಸೆಪ್ಟೆಂಬರ್ 3, 4ರಂದು ಗುಜರಾತ್ ತಲಪುವ ನಿರೀಕ್ಷೆಯಿದೆ. 

27 August 2025

28.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


ಇವತ್ತು ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ 

28.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ  ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚೆನೆ ಇದೆ. ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಮಳೆ ಸ್ವಲ್ಪ ಹೆಚ್ಚಾಗುವ ಸಾಧ್ಯತೆಗಳಿವೆ.
ಈಗಿನಂತೆ ಸೆಪ್ಟೆಂಬರ್ 5ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಆಗಸ್ಟ್ 31ರ ತನಕ ಮಳೆ ಮುಂದುವರಿಯುವ ಸೂಚನೆಗಳಿವೆ. 

ಒಳನಾಡು :  ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಆಗಸ್ಟ್ 29ರ ತನಕ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಮುಂದುವರಿಯುವ ಸೂಚನೆಗಳಿವೆ.

ಬಂಗಾಳಕೊಲ್ಲಿಯ ಒಡಿಸ್ಸಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಚಲನೆಯು ನಿಧಾನ ಗತಿಯಲ್ಲಿದ್ದು, ಪಥದ ಅನಿಶ್ಚಿತತೆ ಮುಂದುವರಿದಿದೆ. 

26 August 2025

27.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

27.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ದಿನದಲ್ಲಿ 2, 3 ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಇರಬಹುದು. ಕರಾವಳಿ ತೀರ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. 
ಈಗಿನಂತೆ ಸೆಪ್ಟೆಂಬರ್ 1 ರ ತನಕ ಈ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 
ಈಗಿನಂತೆ ಆಗಸ್ಟ್ 31ರ ತನಕ ತುಂತುರು ಹಾಗೂ ಒಂದೆರಡು ದಿನ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. 

ಒಳನಾಡು : ಉತ್ತರ ಒಳನಾಡಿನ ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ  ಮಧ್ಯಾಹ್ನ ನಂತರ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ (ಕೊಳ್ಳೇಗಾಲ ಭಾಗಗಳಲ್ಲಿ), ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಬಂಗಾಳಕೊಲ್ಲಿಯ ಒಡಿಸ್ಸಾ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಚಲಿಸುವ ಪಥದ ನಿಖರತೆ ಇನ್ನೂ ಸ್ಪಷ್ಟವಾಗಿಲ್ಲ. ಇದರ ಪರಿಣಾಮದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು, ರಾಜ್ಯದಲ್ಲಿ ಒಂದು ವಾರದ ಕಾಲ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 



23 August 2025

24.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಸಂಜೆ ಅಥವಾ ರಾತ್ರಿ ಅಲ್ಲಲ್ಲಿ ತುಂತುರು ಹಾಗೂ ಒಂದೆರಡು ಕಡೆ ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಕರಾವಳಿ ತೀರ ಭಾಗಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಇದೇ ವಾತಾವರಣ ಆಗಸ್ಟ್ 25ರ ತನಕ ಮುಂದುವರಿಯಲಿದ್ದು, 26ರಿಂದ 31ರ ತನಕ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ. 

ಮಲೆನಾಡು : ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುನ್ಸೂಚನೆ ಇದ್ದು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನದ ಒಳನಾಡಿನ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಆಗಸ್ಟ್ 25ರ ತನಕ ಇದೇ ವಾತಾವರಣ ಮುಂದುವರಿಯ ಸಾಧ್ಯತೆಗಳಿದ್ದು, 26ರಿಂದ ಅಲ್ಲಲ್ಲಿ ಮಳೆ ಆರಂಭವಾಗುವ ಸೂಚನೆಗಳಿವೆ. 

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಆಗಸ್ಟ್ 24ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣ ಇರಲಿದ್ದು, 26ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

21 August 2025

22.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

22.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕರಾವಳಿ ತೀರ ಭಾಗಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 24ರ ತನಕ ಮೋಡ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯಲಿದೆ. ಬಂಗಾಳಕೊಲ್ಲಿಯ ಒಡಿಸ್ಸಾ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತದ ಪರಿಣಾಮದಿಂದ 25ರಿಂದ 4 ರಿಂದ 5 ದಿನಗಳ ಕಾಲ ಮಳೆಯ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಸಾಧ್ಯತೆ ಇದೆ.
ಈಗಿನಂತೆ ಆಗಸ್ಟ್ 24ರ ತನಕ ಇದೇ ವಾತಾವರಣ ಮುಂದುವರಿಯುವ ಸಾಧ್ಯತೆಗಳಿದ್ದು, 25ರಿಂದ 31ರ ತನಕ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಒಳನಾಡು : ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯನಗರ, ದಾವಣಗೆರೆ, ಬಳ್ಳಾರಿ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಒಂದೆರಡು ತುಂತುರು ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 
ದಕ್ಷಿಣ ಒಳನಾಡಿನ ಕೋಲಾರ ಹಾಗೂ ಬೆಂಗಳೂರು ದಕ್ಷಿಣ ಭಾಗಗಳಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. 
ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ಉತ್ತರ ಒಳನಾಡಿನಲ್ಲಿ ಆಗಸ್ಟ್ 22ರಿಂದ 25ರ ತನಕ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣ ಇರಲಿದೆ. 
ದಕ್ಷಿಣ ಒಳನಾಡಿನಲ್ಲಿ ಆಗಸ್ಟ್ 23ರ ತನಕ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದ್ದು, 24ರಿಂದ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ. 
ಆಗಸ್ಟ್ 26ರಿಂದ ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮದಿಂದ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಆರಂಭವಾಗುವ ನಿರೀಕ್ಷೆ ಇದೆ. 

ಆಗಸ್ಟ್ 25ರಂದು ಬಂಗಾಳಕೊಲ್ಲಿಯ ಒಡಿಸ್ಸಾ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. 

19 August 2025

20.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೋಡ, ಬಿಸಿಲು ಹಾಗೂ ಬಿಟ್ಟು ಬಿಟ್ಟು ದಿನದಲ್ಲಿ ಸಣ್ಣ ಪ್ರಮಾಣದ 3, 4 ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಆಗಸ್ಟ್ 21ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿವೆ. 

ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚೆನೆ ಇದೆ. 
ಈಗಿನಂತೆ ಆಗಸ್ಟ್ 21ರಿಂದ ಮಳೆ ಸಂಪೂರ್ಣ ಕಡಿಮೆಯಾಗುವ ಲಕ್ಷಣಗಳಿವೆ. 

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ವಿಜಯನಗರ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕಲಬುರ್ಗಿ, ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. 
ದಕ್ಷಿಣ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದ್ದು, ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 
ಈಗಿನಂತೆ ದಕ್ಷಿಣ ಒಳನಾಡಿನಲ್ಲಿ ಈಗಾಗಲೇ ಮಳೆ ಕಡಿಮೆಯಾಗಿದ್ದು, ಉತ್ತರ ಒಳನಾಡು ಭಾಗಗಳಲ್ಲಿ ಆಗಸ್ಟ್ 20ರಿಂದ ಮಳೆ ಕಡಿಮೆಯಾಗುವ ಸೂಚನೆಗಳಿವೆ. 

ಒಡಿಸ್ಸಾದಲ್ಲಿರುವುದು ವಾಯುಭಾರ ಕುಸಿತವು ಇನ್ನೆರಡು ದಿನಗಳಲ್ಲಿ ಮಹಾರಾಷ್ಟ್ರ ಹಾಗೂ ಗುಜರಾತ್ ಗೆ ತಲಪುವ ನಿರೀಕ್ಷೆಯಿದೆ. 
ಈ ಮಧ್ಯೆ ಕಳೆದ ಎರಡು ದಿನಗಳಿಂದ ಅರಬ್ಬಿ ಸಮುದ್ರದ ಗುಜರಾತ್, ಮಹಾರಾಷ್ಟ್ರ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತ ಉಂಟಾಗಿದ್ದು, ಆಗಸ್ಟ್ 20ರಂದು ಅದೂ ಶಿಥಿಲಗೊಳ್ಳುವ ಸಾಧ್ಯತೆ ಇದೆ. ಇದರಿಂದ ಮಹಾರಾಷ್ಟ್ರ ಹಾಗೂ ಕರ್ನಾಟಕ ಕರಾವಳಿ ಜಿಲ್ಲೆಗಳಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗಲಿದೆ. 


18 August 2025

19.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ :  ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಸಂಜೆ ಹಾಗೂ ರಾತ್ರಿ ಸ್ವಲ್ಪ ಹೆಚ್ಚಿರುವ ಸಾಧ್ಯತೆಗಳಿವೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ  ಆಗಸ್ಟ್ 19ರಿಂದ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗುವ ಮುನ್ಸೂಚನೆ ಇದೆ. ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ 21ರಿಂದ ಕಡಿಮೆಯಾಗಬಹುದು. 

ಮಲೆನಾಡು : ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಆಗಸ್ಟ್ 19ರಿಂದ ಮಳೆ ಕಡಿಮೆ ಇರಬಹುದು. ಚಿಕ್ಕಮಗಳೂರು ಹಾಗೂ ಶಿವಮೊಗ್ಗದ ಜಿಲ್ಲೆಗಳ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. 

ಒಳನಾಡು : ಉತ್ತರ ಒಳನಾಡಿನ ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಉಳಿದ ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ದಕ್ಷಿಣ ಒಳನಾಡಿನ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಪ್ರದೇಶಗಳಲ್ಲಿ ಮಳೆ ಸ್ವಲ್ಪ ಹೆಚ್ಚಿರಬಹುದು. 
ಈಗಿನಂತೆ ದಕ್ಷಿಣ ಒಳನಾಡಿನಲ್ಲಿ ಆಗಸ್ಟ್ 19ರಿಂದ ಮತ್ತು ಉತ್ತರ ಒಳನಾಡಿನಲ್ಲಿ ಆಗಸ್ಟ್ 20ರಿಂದ ಮಳೆ ಕಡಿಮೆಯಾಗುವ ಸೂಚನೆಗಳಿವೆ. 

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಗಸ್ಟ್ 20, 21ರಂದು ಮಹಾರಾಷ್ಟ್ರ ಮೂಲಕ ಸಾಗಿ ಗುಜರಾತ್ ತಲುಪಲಿದೆ. 
ಆಗಸ್ಟ್ 18ರಿಂದ 20ರ ತನಕ ಉತ್ತರ ಕರ್ನಾಟಕ ಸೇರಿದಂತೆ ಮಹಾರಾಷ್ಟ್ರದಾದ್ಯಂತ ಭಾರಿ ಮಳೆಯ ಮುನ್ಸೂಚನೆ ಇದೆ. ಮುಂಬೈ ಸುತ್ತಮುತ್ತ ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ. 21ರಂದು ಗುಜರಾತ್ ನ ಬಹುತೇಕ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚೆನೆ ಇದೆ. 

17 August 2025

18.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಭಾರಿ ಮಳೆಯ ಸಾಧ್ಯತೆಗಳಿವೆ. 
ಈಗಿನಂತೆ ಆಗಸ್ಟ್ 20ರ ತನಕ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಭಾರಿ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ಆಗಸ್ಟ್ 19ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಮುನ್ಸೂಚನೆ ಇದೆ.

ಒಳನಾಡು :  ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಉತ್ತರ ಒಳನಾಡಿನ ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ಆಗಸ್ಟ್ 19ರಿಂದ ದಕ್ಷಿಣ ಒಳನಾಡು ಮತ್ತು 20ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಮಳೆ ಕ್ಷೀಣಿಸುವ ಸಾಧ್ಯತೆಗಳಿವೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ತಿರುಗುವಿಕೆಯು ವಿಸ್ತರಣೆಯಾಗುತ್ತಿದ್ದು, ಆಗಸ್ಟ್ 18ರಿಂದ ಪೂರ್ವದಿಂದ ಬಂದ ಗಾಳಿಯು ಮತ್ತೆ ಪೂರ್ವಕ್ಕೆ ತಿರುಗುವಿಕೆಯು ಮುಂಬೈ ತೀರದಲ್ಲಿರುವುದರಿಂದ ಆಗಸ್ಟ್ 18 ರಿಂದ 20ರ ತನಕ ಮುಂಬೈ ಸುತ್ತಮುತ್ತ ಪ್ರದೇಶಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. 

16 August 2025

17.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

17.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚೆನೆ ಇದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚೆನೆ ಇದೆ. 
ಈಗಿನಂತೆ ಆಗಸ್ಟ್ 20ರ ತನಕ ಮಳೆಯ ಮುನ್ಸೂಚೆನೆ ಇದೆ. ನಂತರ ಕಡಿಮೆಯಾಗ
 ಮೋಡ ಬಿಸಿಲಿನ ವಾತಾವರಣದ ಸಾಧ್ಯತೆಗಳಿವೆ. 25ರಿಂದ ಸಾಮಾನ್ಯ ಮಳೆ ಆರಂಭವಾಗುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಆಗಸ್ಟ್ 18 ಹಾಗೂ 19ರಂದು ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಿರುವ ಸಾಧ್ಯತೆಗಳಿವೆ. 21ರಿಂದ ಮೋಡ ಹಾಗೂ ಬಿಸಿಲಿನ ವಾತಾವರಣದ ಸಾಧ್ಯತೆಗಳಿವೆ. 

ಒಳನಾಡು : ಉತ್ತರ ಒಳನಾಡಿನ ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದ್ದರೆ, ಉಳಿದ ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ದಕ್ಷಿಣ ಒಳನಾಡಿನ ಚಾಮರಾಜನಗರ ಹೊರತು ಪಡಿಸಿ ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ತುಮಕೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸ್ವಲ್ಪ ಹೆಚ್ಚಿರಬಹುದು. 

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ, ಒಡಿಶಾ ಕರಾವಳಿಯಲ್ಲಿ ಇದ್ದು, ಆಗಸ್ಟ್ 20,21ರಂದು ಗುಜರಾತ್ ತಲಪುವ ನಿರೀಕ್ಷೆಯಿದೆ. ಈ ಮಧ್ಯೆ ಮುಂಬೈ ಕಡಲ ತೀರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಆಗಸ್ಟ್ 20ರ ತನಕ ಮುಂಬೈ ಸೇರಿದಂತೆ ಮಹಾರಾಷ್ಟ್ರ ಕರಾವಳಿಯಲ್ಲಿ ಭಾರಿ ಮಳೆಯ ಮುನ್ಸೂಚೆನೆ ಇದೆ. 


15 August 2025

16.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


16.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬಿಡುವಿನ ಸಮಯ ಸ್ವಲ್ಪ ಹೆಚ್ಚಿರಬಹುದು.
ಈಗಿನಂತೆ ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಗಸ್ಟ್ 20ರ ತನಕವೂ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ ಸಾಧ್ಯತೆಗಳಿವೆ. ನಂತರ ಮೋಡ ಹಾಗೂ ಬಿಸಿಲಿನ ವಾತಾವರಣದ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ಈಗಿನಂತೆ ಆಗಸ್ಟ್ 19ರ ತನಕವೂ ಮಳೆಯ ಮುನ್ಸೂಚೆನೆ ಇದೆ. 18 ಹಾಗೂ 19ರಂದು ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಿರಬಹುದು. ನಂತರ ಮೋಡ ಹಾಗೂ ಬಿಸಿಲಿನ ವಾತಾವರಣದ ಸಾಧ್ಯತೆಗಳಿವೆ. 

ಒಳನಾಡು : ಉತ್ತರ ಒಳನಾಡಿನ ಕಲಬುರ್ಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಬೀದರ್ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ವಿಜಯಪುರ, ವಿಜಯನಗರ, ದಾವಣಗೆರೆ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 
ಈಗಿನಂತೆ ಉತ್ತರ ಒಳನಾಡಿನಲ್ಲಿ ಆಗಸ್ಟ್ 20ರ ತನಕ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಆಗಸ್ಟ್ 19ರ ತನಕ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ. ಆಗಸ್ಟ್ 19 ಹಾಗೂ 20ರಂದು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. 

ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು ಪ್ರಭಲಗೊಂಡು ಮಧ್ಯಪ್ರದೇಶ, ಮಹಾರಾಷ್ಟ್ರ ರಾಜ್ಯಗಳಲ್ಲಿ ಸಾಗಿ ಆಗಸ್ಟ್ 22,23ರಂದು ಗುಜರಾತ್ ಗೆ ತಲಪುವ ನಿರೀಕ್ಷೆಯಿದೆ. 

14 August 2025

15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮಧ್ಯ ಬಿಡುವಿನ ಅವಧಿ ಕಡಿಮೆ ಇರಬಹುದು. 
ಈಗಿನಂತೆ ಆಗಸ್ಟ್ 17ರಿಂದ 20ರ ತನಕ ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ, 17ರಿಂದ 19ರ ತನಕ ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಿರುವ ಸಾಧ್ಯತೆಗಳಿವೆ. ನಂತರ ಕಡಿಮೆಯಾಗಬಹುದು. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಆಗಸ್ಟ್ 17ರಿಂದ 19ರ ತನಕ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಿರುವ ಸೂಚನೆಗಳಿವೆ. 

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯ ಒಂದೆರಡು ಕಡೆ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ, ದಾವಣಗೆರೆ, ವಿಜಯಪುರ, ರಾಯಚೂರು, ಕಲಬುರ್ಗಿ, ಯಾದಗಿರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು. 
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 
ಈಗಿನಂತೆ ಆಗಸ್ಟ್ 20ರ ತನಕವೂ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ನಂತರ ಬಿಸಿಲಿನ ವಾತಾವರಣ ಇರಬಹುದು. 

19.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ರಾಜ...