Advertise

02 August 2025

03.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

03.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದೊಂದಿಗೆ ದಿನದಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಆಗಸ್ಟ್ 4ರಿಂದ ಉತ್ತರ ಕನ್ನಡ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಮಳೆ ಸ್ವಲ್ಪ ಹೆಚ್ಚಾಗುವ ಸಾಧ್ಯತೆಗಳಿದ್ದು, ಆಗಸ್ಟ್ 5ರಿಂದ 8ರ ತನಕ ಉತ್ತಮ ಹಾಗೂ ಕರಾವಳಿ ತೀರ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 6ರಿಂದ 8ರ ತನಕ ಉತ್ತಮ ಮಳೆಯ ಮುನ್ಸೂಚನೆ ಇದೆ.
ನಂತರ ಮಳೆ ಕಡಿಮೆಯಾಗುವ ಸೂಚನೆಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಇರಲಿದ್ದು, ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚೆನೆ ಇದೆ. ಹಾಸನದ ಮೈಸೂರು ಜಿಲ್ಲೆಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. 
ಈಗಿನಂತೆ ಆಗಸ್ಟ್ 4ರಿಂದ ಆಗಸ್ಟ್ಮ 8ರ ತನಕ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ಇದೆ. 

ಒಳನಾಡು : ಉತ್ತರ ಒಳನಾಡಿನ ಕೊಪ್ಪಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಬೆಳಗಾವಿ, ಧಾರವಾಡ, ಹಾವೇರಿ, ದಾವಣಗೆರೆ, ವಿಜಯನಗರ, ಹಾಗೂ ಕಲಬುರ್ಗಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚೆನೆ ಇದೆ. 
ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಇರಬಹುದು. 
ದಕ್ಷಿಣ ಒಳನಾಡಿನ ಮೈಸೂರು ಹೆಚ್ಚಿನ ಭಾಗಗಳಲ್ಲಿ ಹಾಗೂ ಚಾಮರಾಜನಗರದ ಒಂದೆರಡು ಕಡೆಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮಂಡ್ಯ, ರಾಮನಗರ, ಬೆಂಗಳೂರು ಹಾಗೂ ತುಮಕೂರು ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 

ಮುಂಗಾರು ದುರ್ಬಲಗೊಂಡಿದ್ದು,   ಬಂಗಾಳಕೊಲ್ಲಿಯ ತಮಿಳುನಾಡು ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮಧ್ಯಮ ಸ್ತರದ ಗಾಳಿಯು ಬಂಗಾಳಕೊಲ್ಲಿಯ ಕಡೆಯಿಂದ ಬೀಸಲು ಆರಂಭವಾಗಿದ್ದು, ಅರಬ್ಬಿ ಸಮುದ್ರದ ಕಡೆಯಿಂದ ಸಾಗುವ ಮುಂಗಾರು ಮಾರುತಗಳು ಹಾಗೂ ಬಂಗಾಳ ಕೊಲ್ಲಿಯ ಭಾಗದಿಂದ ಬೀಸುವ ಗಾಳಿಯು, ಪಶ್ಚಿಮ ಕರಾವಳಿಯಲ್ಲಿ ಸಂಧಿಸುವುದರಿಂದ, ಕೇರಳ ಹಾಗೂ ಕರ್ನಾಟಕ ರಾಜ್ಯಗಳ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 3ರಿಂದ 4 ಅಥವಾ 5 ದಿವಸಗಳ ಕಾಲ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚೆನೆ ಇದೆ. 

No comments:

Post a Comment

30.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

30.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕ ರಾಜ್...