Advertise

09 August 2025

10.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

10.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ರಾಜ್ಯದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಜಿಲ್ಲೆಗಳಲ್ಲಿ ಮಧ್ಯಾಹ್ನದ ನಂತರ, ಸಂಜೆ, ರಾತ್ರಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ಆಗಸ್ಟ್ 12ರ ತನಕ ಇದೇ ವಾತಾವರಣ ಮುಂದುವರಿಯುವ ಸಾಧ್ಯತೆಗಳಿದ್ದು, 13ರಿಂದ ಒಂದೆರಡು ಮಳೆ ಹೆಚ್ಚಾಗುವ ನಿರೀಕ್ಷೆ ಇದೆ. ಆಗಷ್ಟ್ 14 ಅಥವಾ 15ರಿಂದ ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮದಿಂದ ( ಈಗ ತಮಿಳುನಾಡು ಕರಾವಳಿ ಸಮೀಪ ಇದೆ) 
ಮುಂಗಾರು ಸ್ವಲ್ಪ ಚುರುಕಾಗುವ ಸೂಚನೆಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೂ ಪ್ರಮಾಣ ಸ್ವಲ್ಪ ಕಡಿಮೆ ಇರಬಹುದು.
ಈಗಿನಂತೆ ಆಗಸ್ಟ್ 10ರಿಂದ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಆಗಸ್ಟ್ 15 ಅಥವಾ 16ರಿಂದ ಮುಂಗಾರು ಸ್ವಲ್ಪ ಚುರುಕಾಗುವ ಸಾಧ್ಯತೆಗಳಿವೆ.

ಒಳನಾಡು :  ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ವಿಜಯನಗರ, ದಾವಣಗೆರೆ, ಬಳ್ಳಾರಿ, ರಾಯಚೂರು, ಗುಲ್ಬರ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಚಿಕ್ಕಬಳ್ಳಾಪುರ, ತುಮಕೂರು ( ಪಾವಗಢ ಹೆಚ್ಚು ಮಳೆಯ ಮುನ್ಸೂಚೆನೆ ಇದೆ), ಚಿತ್ರದುರ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೋಲಾರ ಜಿಲ್ಲೆಯಲ್ಲಿ ಮೋಡ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಈಗಿನಂತೆ ಆಗಸ್ಟ್ 10ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ಮಳೆ ಕಡಿಮೆ ಆಗುವ ಸೂಚನೆಗಳಿವೆ. 

ಈಗಿನ ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಆಂದ್ರಾ ಕರಾವಳಿ ದಾಟಿ ಉತ್ತರಕ್ಕೆ ಚಲಿಸುತ್ತಿದ್ದಂತೆಯೇ ಮುಂಗಾರು ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ. 

No comments:

Post a Comment

30.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

30.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕ ರಾಜ್...