ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ನಂತರ, ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಗುಡುಗು ಸಹ ಇರಬಹುದು. ಕರಾವಳಿ ತೀರ ಭಾಗಗಳ ಕೆಲವು ಕಡೆ ಉತ್ತಮ ಮಳೆಯ ಸಾಧ್ಯತೆ ಇದೆ.
ಈಗಿನಂತೆ ವಾಯುಭಾರ ಕುಸಿತ ಈ ಮಳೆಯು ಆಗಸ್ಟ್ 21ರ ತನಕ ಮುಂದುವರಿಯುವ ಸಾಧ್ಯತೆಗಳಿವೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಆಗಸ್ಟ್ 17ರಿಂದ 19ರ ತನಕ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆ ಪ್ರಮಾಣ ಸ್ವಲ್ಪ ಹೆಚ್ಚಿರುವ ಸಾಧ್ಯತೆಗಳಿವೆ. ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆ ಇರಬಹುದು.
ಒಳನಾಡು : ಇವತ್ತು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚೆನೆ ಇದೆ.
ಉತ್ತರ ಒಳನಾಡಿನ ವಿಜಯಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಯಾದಗಿರಿ, ರಾಯಚೂರು ಜಿಲ್ಲೆಗಳ ಆಂದ್ರಾ ಗಡಿಭಾಗಗಳಲ್ಲಿ ಸಹ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ದಕ್ಷಿಣ ಒಳನಾಡಿನ ಚಾಮರಾಜನಗರದ ಒಂದೆರಡು ಕಡೆ ಮಾತ್ರ ತುಂತುರು ಮಳೆಯ ಮುನ್ಸೂಚೆನೆ ಇದೆ. ಉಳಿದ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ, ಮಧ್ಯ ಪ್ರದೇಶ, ಮಹಾರಾಷ್ಟ್ರ ಮೂಲಕ ಆಗಸ್ಟ್ 20,21ರಂದು ಗುಜರಾತ್ ಗೆ ತಲಪುವ ನಿರೀಕ್ಷೆಯಿದೆ.
No comments:
Post a Comment