Advertise

17 August 2025

18.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಭಾರಿ ಮಳೆಯ ಸಾಧ್ಯತೆಗಳಿವೆ. 
ಈಗಿನಂತೆ ಆಗಸ್ಟ್ 20ರ ತನಕ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಭಾರಿ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ಆಗಸ್ಟ್ 19ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಮುನ್ಸೂಚನೆ ಇದೆ.

ಒಳನಾಡು :  ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಉತ್ತರ ಒಳನಾಡಿನ ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ಆಗಸ್ಟ್ 19ರಿಂದ ದಕ್ಷಿಣ ಒಳನಾಡು ಮತ್ತು 20ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಮಳೆ ಕ್ಷೀಣಿಸುವ ಸಾಧ್ಯತೆಗಳಿವೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ತಿರುಗುವಿಕೆಯು ವಿಸ್ತರಣೆಯಾಗುತ್ತಿದ್ದು, ಆಗಸ್ಟ್ 18ರಿಂದ ಪೂರ್ವದಿಂದ ಬಂದ ಗಾಳಿಯು ಮತ್ತೆ ಪೂರ್ವಕ್ಕೆ ತಿರುಗುವಿಕೆಯು ಮುಂಬೈ ತೀರದಲ್ಲಿರುವುದರಿಂದ ಆಗಸ್ಟ್ 18 ರಿಂದ 20ರ ತನಕ ಮುಂಬೈ ಸುತ್ತಮುತ್ತ ಪ್ರದೇಶಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. 

No comments:

Post a Comment

30.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

30.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕ ರಾಜ್...