ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಮಳೆಯ ಮುನ್ಸೂಚೆನೆ ಇದೆ. ಅಲ್ಲಲ್ಲಿ ಸಣ್ಣ ಅವಧಿಯ ಬಿಸಿಲು ಇರಬಹುದು.
ಈಗಿನಂತೆ ಬಂಗಾಳಕೊಲ್ಲಿಯ ಒಡಿಸ್ಸಾ ಕರಾವಳಿಯಲ್ಲಿ ಇನ್ನೊಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಇದರ ಪರಿಣಾಮದಿಂದ ಸೆಪ್ಟೆಂಬರ್ 1ರ ತನಕ ಮಳೆಯ ಪ್ರಮಾಣ ಕಡಿಮೆ ಇದ್ದು, 2ರಿಂದ ಮತ್ತೆ ಹೆಚ್ಚಾಗುವ ಸಾಧ್ಯತೆಗಳಿವೆ. ಈ ಮಳೆಯು ಸೆಪ್ಟೆಂಬರ್ 7ರ ತನಕ ಮುಂದುವರಿಯುವ ಸೂಚನೆಗಳಿವೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಸೆಪ್ಟೆಂಬರ್ 1ರ ತನಕ ಮಳೆಯ ಪ್ರಮಾಣ ಕಡಿಮೆ ಇದ್ದು, 2ರಿಂದ ಹೆಚ್ಚಾಗುವ ನಿರೀಕ್ಷೆ ಇದೆ.
ಒಳನಾಡು : ಉತ್ತರ ಒಳನಾಡಿನ ಬೀದರ್ ಜಿಲ್ಲೆಯ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಾವಣಗೆರೆ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಭಾರಿ ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ.
ಸೆಪ್ಟೆಂಬರ್ 2ರಂದು ಬಂಗಾಳಕೊಲ್ಲಿಯ ಒಡಿಸ್ಸಾ ಕರಾವಳಿಯಲ್ಲಿ ಇನ್ನೊಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 6ರಂದು ಮಹಾರಾಷ್ಟ್ರ, ಗುಜರಾತ್ ತಲಪುವ ನಿರೀಕ್ಷೆಯಿದೆ.
No comments:
Post a Comment