ಕರಾವಳಿ : ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದ್ದು, ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚೆನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕರಾವಳಿ ತೀರ ಭಾಗಗಳಲ್ಲಿ ಅಲ್ಲಲ್ಲಿ ಬಿಸಿಲು ಹಾಗೂ ಒಂದೆರಡು ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ, ಬಿಸಿಲು ಹಾಗೂ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಈ ವಾತಾವರಣವು ಒಕ್ಟೊಬರ್ 3ರ ತನಕ ಮುಂದುವರಿಯಲಿದ್ದು, 4ರಂದು ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ.
ಈಗಿನಂತೆ ಈ ವಾತಾವರಣವು ಒಕ್ಟೊಬರ್ 2ರ ತನಕ ಮುಂದುವರಿಯಲಿದ್ದು, 3 ರಿಂದ ಮಲೆನಾಡಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಒಳನಾಡು : ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಈಗಿನಂತೆ ವಾಯುಭಾರ ಕುಸಿತದ ಪರಿಣಾಮದಿಂದ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಒಕ್ಟೊಬರ್ 25ರಿಂದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಬಂಗಾಳಕೊಲ್ಲಿಯಲ್ಲಿ ಇನ್ನೊಂದು ವಾಯುಭಾರ ಕುಸಿತ ಉಂಟಾಗಿದ್ದು, ಸುಮಾರು ಒಕ್ಟೊಬರ್ 3ರ ಸಮಯದಲ್ಲಿ ಪಶ್ಚಿಮ ಬಂಗಾಳ ಪ್ರವೇಶಿಸುವ ಸಾಧ್ಯತೆಗಳಿವೆ.
ಇದೇ ಸಮಯದಲ್ಲಿ ಉತ್ತರ ಗುಜರಾತ್ ನಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಪಶ್ಚಿಮಾಭಿಮುಖವಾಗಿ ಚಲಿಸುವ ಲಕ್ಷಣಗಳಿವೆ.