ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆಯಾಗಿದೆ. ಆದರೆ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಒಂದೆರಡು ಕಡೆ ಸಂಜೆ, ರಾತ್ರಿ ಒಂದೆರಡು ತುಂತುರು ಮಳೆಯ ಸಾಧ್ಯತೆ ಇದೆ.
ಈಗಿನಂತೆ ಮುಂಗಾರು ಮತ್ತಷ್ಟು ದುರ್ಬಲಗೊಂಡಿದ್ದು
ಈಗಿನಂತೆ ಸೆಪ್ಟೆಂಬರ್ 9 ಹಾಗೂ 10ರಂದು ಘಟ್ಟದ ಕೆಳಗಿನ ಪ್ರದೇಶಗಳಲ್ಲಿ, ಅದರಲ್ಲೂ ಸುಬ್ರಮಣ್ಯ ಸುತ್ತಮುತ್ತ ಪ್ರದೇಶಗಳಲ್ಲಿ ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆ ಕಡಿಮೆಯಾದರೂ ಸೆಪ್ಟೆಂಬರ್ 9 ಹಾಗೂ 10ರಂದು ಕೊಡಗು, ಹಾಸನ ಜಿಲ್ಲೆಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ.
ಒಳನಾಡು : ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಈಗಿನಂತೆ ಸೆಪ್ಟೆಂಬರ್ 9ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಗುಜರಾತ್ ಗೆ ತಲಪಿರುವ ವಾಯುಭಾರ ಕುಸಿತವು ನಾಳೆ ಪಾಕಿಸ್ತಾನ ಗಡಿ ದಾಟಲಿದೆ ಮತ್ತು ಶಿಥಿಲಗೊಳ್ಳುವ ಲಕ್ಷಣಗಳಿವೆ.
ಸೆಪ್ಟೆಂಬರ್ 13ರಂದು ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಇದರ ಪರಿಣಾಮದಿಂದ ರಾಜ್ಯದ ಉತ್ತರ, ಹಾಗೂ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸೂಚನೆಗಳಿವೆ.
No comments:
Post a Comment